ಬಳ್ಳಾರಿ: ಶಾಸಕ ಶ್ರೀರಾಮುಲು ರಾಜೀನಾಮೆಯಿಂದ ತೆರವಾಗಿರುವ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದೆ. ಮೈತ್ರಿ ಸರ್ಕಾರದ ಬಹುತೇಕ ನಾಯಕರು ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ಬಾರಿ ಬಳ್ಳಾರಿಯನ್ನು ಹೇಗಾದ್ರೂ ತಮ್ಮ ವಶಕ್ಕೆ ಪಡೆದುಕೊಳ್ಳಬೇಕೆಂದು ಕಾಂಗ್ರೆಸ್ ಚುನಾವಣಾ ರಣತಂತ್ರಗಳನ್ನು ರೂಪಿಸಿದೆ. ಇತ್ತ ಶಾಸಕ ಶ್ರೀರಾಮುಲು ಸೋದರಿ ಜೆ.ಶಾಂತಾ ಪರವಾಗಿ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.
ಶ್ರೀರಾಮುಲು ಕುಚುಕು ಗೆಳೆಯ ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಗೆ ಆಗಮಿಸುವಂತಿಲ್ಲ. ಹಾಗಾಗಿ ಚುನಾವಣೆಯಲ್ಲಿ ಶ್ರೀರಾಮುಲು ಏಕಾಂಗಿ ಆದ್ರಾ ಎಂಬ ಪ್ರಶ್ನೆ ಸಹ ಹುಟ್ಟಿಕೊಂಡಿತ್ತು. ಇದೀಗ ಜನಾರ್ದನ ರೆಡ್ಡಿ ಗಡಿಭಾಗದಲ್ಲಿಯೇ ಉಳಿದುಕೊಂಡು ಬಳ್ಳಾರಿ ರಾಜಕಾರಣದ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಬಳ್ಳಾರಿ ಗಡಿಗೆ ಹೊಂದಿಕೊಂಡಿರುವ ಚಿತ್ರದುರ್ಗದ ಮೊಳಕಾಲ್ಮೂರಲ್ಲಿ ನಡೆಯುವ ಸಾಮೂಹಿಕ ವಿವಾಹದಲ್ಲಿ ಜನಾರ್ದನ ರೆಡ್ಡಿ ಭಾಗಿಯಾಗಲಿದ್ದಾರೆ.
Advertisement
Advertisement
ಸಾಮೂಹಿಕ ವಿವಾಹದ ನಂತರ ಜನಾರ್ದನ ರೆಡ್ಡಿ, ಬಳ್ಳಾರಿ ಬಿಜೆಪಿ ಜಿಲ್ಲಾ ಮುಖಂಡ ಜೊತೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಗಡಿಭಾಗದಲ್ಲಿಯೇ ಉಳಿದುಕೊಂಡು ಎಲ್ಲವನ್ನು ರೆಡ್ಡಿ ಗಮನಿಸಲಿದ್ದಾರೆ. ವಿಧಾನ ಸಭಾ ಚುನಾವಣೆ ಸಮಯದಲ್ಲೂ ಜನಾರ್ದನ ರೆಡ್ಡಿ ಮೊಳಕಾಲ್ಮೂರಿನಲ್ಲಿಯೇ ಮನೆಯೊಂದನ್ನು ಪಡೆದುಕೊಂಡು ಬಳ್ಳಾರಿ ಚುನಾವಣೆಯ ಮೇಲುಸ್ತುವಾರಿಯನ್ನು ನೋಡಿಕೊಂಡಿದ್ದರು.
Advertisement
ಇಂದು ಬಳ್ಳಾರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಕಂಪ್ಲಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಸಂಸದ ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 2 ಗಂಟೆಗೆ ಕೊಡ್ಲಿಗಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಹಗರಿಬೊಮ್ಮನಹಳ್ಳಿಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸಂಜೆ 6 ಗಂಟೆಗೆ ಬಳ್ಳಾರಿಯ ಕೌಲ್ ಬಜಾರನಲ್ಲಿ ದಿನೇಶ್ ಗುಂಡೂರಾವ್, ಮಾಜಿ ಪ್ರಧಾನಿ ದೇವೇಗೌಡ, ಕೈ ಅಭ್ಯರ್ಥಿ ಉಗ್ರಪ್ಪ ಪ್ರಚಾರ ಮಾಡಲಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv