ಹುಬ್ಬಳ್ಳಿ: ಗಾಲಿ ಜನಾರ್ದನ ರೆಡ್ಡಿ (JanardhanReddy) ಯ ಪಕ್ಷ ಧೂಳಿಪಟವಾಗಲಿದೆ. ಸುಪ್ರೀಂಕೋರ್ಟ್ ಬಳ್ಳಾರಿ ಮತ್ತು ಆಂಧ್ರ ಪ್ರದೇಶ ಪ್ರವೇಶಕ್ಕೆ ನಿರ್ಬಂಧ ಹಾಕಿದೆ. ಇಂಥವರು ಸಾರ್ವಜನಿಕ ಜೀವನಕ್ಕೆ ಬರಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ (S. R. Hiremath) ಎಂದು ಹೇಳಿದರು.
Advertisement
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಂಥವರ ರಾಜಕೀಯ ಪಕ್ಷ ಅಸ್ತಿತ್ವಕ್ಕೆ ತರುವುದು ಸರಿಯಲ್ಲ. ದಶಕಗಳ ಹಿಂದ ಇಂಥದ್ದೊಂದು ಪ್ರಯತ್ನ ನಡೆದಿತ್ತು. ಗಾಲಿ ಜನಾರ್ದನ ರೆಡ್ಡಿ ಬಲಗೈ ಬಂಟ ಶ್ರೀರಾಮುಲು (Sriramulu) ಬಿ.ಎಸ್.ಆರ್. ಆರಂಭಿಸಿದ್ದರು. ಬಿಎಸ್‍ಆರ್ ಗಾಳಿಪಟದಂತೆ ಹಾರಿ ಹೋಗಲು ನಾವು ಪಾದಯಾತ್ರೆ ಮಾಡಿದ್ದೆವು ಎಂದರು. ಇದನ್ನೂ ಓದಿ: ಮತ್ತೆ ಒಂದಾದ ಕೆ.ಹೆಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣ
Advertisement
Advertisement
ಜನಾರ್ದನ ರೆಡ್ಡಿಗೂ ನೆಲ ಕಚ್ಚುವ ಸಮಯ ಬಂದೇ ಬರುತ್ತದೆ. ಇಂಥವರ ಪಕ್ಷಕ್ಕೆ ನಮ್ಮ ಪ್ರಜಾಪ್ರಭುತ್ವದಲ್ಲಿ ಯಾವುದೇ ಸ್ಥಾನ ಇರಬಾರದು ಎಂದು ಅವರು ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಕಾನೂನು ಸಚಿವ ಕಿರಣ್ ರಿಜೀಜು ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನ ಮಾಡುವ ಕೆಲಸ ಮಾಡಿದ್ದಾರೆ. ಸಂವಿಧಾನದ ಸಿದ್ಧಾಂತಗಳನ್ನು ಗಾಳಿಗೆ ತೂರಿದ್ದಾರೆ. ಇವರು ತಮ್ಮ ಸ್ಥಾನದಲ್ಲಿ ಮುಂದುವರಿಯುವ ಮೌಲ್ಯವನ್ನು ಕಳೆದುಕೊಂಡಿದ್ದಾರೆ. ಇಂಥವರ ವಿರುದ್ಧದ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.
Advertisement
ವಿ.ಜಿ.ಸಿದ್ಧಾರ್ಥ್ ಮಾಲೀಕತ್ವದ ಜಮೀನನ್ನು ಕೆಲವು ಎನ್.ಜಿ.ಒ ಹಾಗೂ ಪ್ರಭಾವಿ ಅಧಿಕಾರಿಗಳು ಶಾಮೀಲಾಗಿ 708ಕೋಟಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ. ಸರ್ಕಾರದ ಬೆಲೆಗಿಂತ ಹೆಚ್ಚಿನ ಬೆಲೆ ಮಾರಾಟ ಮಾಡುವ ಕುತಂತ್ರ ನಡೆಸುತ್ತಿದ್ದಾರೆ. ಇವರ ವಿರುದ್ಧ ರಾಜ್ಯ ಸರ್ಕಾರ ತನಿಖೆ ಆದೇಶಿಸಬೇಕೆಂದು ಅವರು ಒತ್ತಾಯಿಸಿದರು.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಗೋಮಾಳ ಜಮೀನು ಕಬಳಿ ಮಾಡಿ ಪಾರ್ಮಂಹೌಸ್ ಕಟ್ಟಿದ್ದಾರೆ. ಇದರ ವಿರುದ್ದ ನ್ಯಾಯಾಲಯ ಕೊಟ್ಟ ತೀರ್ಪು ಸ್ವಾಗತಿಸಲಾಗುವುದು ಎಂದರು.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k