– ಪೊಲೀಸರ ಮುಂದೆ ಶರಣಾದ ಗಣಿಧಣಿ ಬಂಟ
ಬೆಂಗಳೂರು: ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನ ತಿರಸ್ಕರಿಸಲಾಗಿದ್ದು, ಇದರ ಪರಿಣಾಮ ಒಂದನೇ ಎಸಿಎಂಎಂ ನ್ಯಾಯಾಲಯದ ಮುಂದೆ ಅಲಿಖಾನ್ ಶರಣಾಗಿದ್ದಾನೆ.
ನಗರದ 61 ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಮೂರ್ತಿ ವಿದ್ಯಾಧರ್ ಶಿರಹಟ್ಟಿ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇತ್ತ ಅಲಿಖಾನ್ ಶರಣಾಗುತ್ತಿದಂತೆ ನ್ಯಾಯಾಲಯದ ಮುಂದೇ ಹಾಜರಾದ ಪ್ರಕರಣದ ತನಿಖಾಧಿಕಾರಿ ವೆಂಕಟೇಶ್ ಪ್ರಸನ್ನ ಅವರು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಅವರ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳು, ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿರುವುದರಿಂದ ಪೊಲೀಸ್ ಕಸ್ಟಡಿ ಕೋರಿ ಮತ್ತೊಂದು ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದರು.
Advertisement
Advertisement
ನ್ಯಾಯಾಲಯ 7 ದಿನಗಳ ಕಾಲ ಅಲಿಖಾನ್‍ಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ನಾಳೆ ಸಾರ್ವತ್ರಿಕ ರಜೆ ಕಾರಣ ಸಿಸಿಬಿ ಪೊಲೀಸರ ಕಸ್ಟಡಿ ಅರ್ಜಿ ಗುರುವಾರ ವಿಚಾರಣೆಗೆ ಬರಲಿದೆ. ಇದರಿಂದ ನ.27 ರ ತನಕ ಅಲಿಖಾನ್ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾನೆ. ಈ ಕುರಿತು ಒಂದನೇ ಎಸಿಎಂಎಂ ನ್ಯಾಯಮೂರ್ತಿ ಜಗದೀಶ್ ಆದೇಶ ನೀಡಿದ್ದಾರೆ.
Advertisement
ಅಲಿಖಾನ್ ವಿರುದ್ಧ ಇಡಿ ಹೆಸರಿನಲ್ಲಿ ಡೀಲ್ ಮಾಡಿದ ಆರೋಪ ಮಾಡಲಾಗಿದ್ದು, 18 ಕೋಟಿ ಮೌಲ್ಯದ ಚಿನ್ನ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಆರೋಪಿಸಿದ್ದಾರೆ. ಈ ಹಿಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಅಲಿಖಾನ್ ಹಣವನ್ನು ಹಿಂದಿರುಗಿಸುವುದಾಗಿ ಹೇಳಿದ್ದ. ಅಲ್ಲದೇ ಈ ಹಣವನ್ನು ಸಾಲದ ರೂಪದಲ್ಲಿ ಪಡೆದಿದ್ದು, ದೇವರ ಹರಕೆ ತೀರಿಸಿಲು ಪಡೆದಿದ್ದಾಗಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದ.
Advertisement
ಅಲಿಖಾನ್ ಪರ ವಕೀಲ ಚಂದ್ರಶೇಖರ್ ಸೋಮವಾರ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಸಿಸಿಬಿ ಪರ ಪಿಪಿ ಶೈಲಾಜಾ ನಾಯಕ್ ವಾದ ಮಾಡಿದ್ದು, ಪ್ರಕರಣದಲ್ಲಿ ಅಲಿಖಾನ್ ಭಾಗಿಯಾಗಿರುವುದು ಕಂಡು ಬಂದಿದೆ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಅವಶ್ಯಕತೆ ಇದೆ. ಪರೋಕ್ಷವಾಗಿ ತಾನು ಭಾಗಿಯಾದ ಬಗ್ಗೆ ಅಲಿಖಾನ್ ಒಪ್ಪಿಗೆ ನೀಡಿದ್ದು, ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ನಾನು ಗೌರವಯುತವಾಗಿ ಹಣ ವಾಪಸ್ ಕೊಡುವುದಾಗಿ ಹೇಳಿದ್ದಾರೆ. ಅಲ್ಲದೇ ತಾಜ್ ಹೋಟೆಲ್ ನಲ್ಲಿ ಫರೀಧ್ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಎಲ್ಲರ ಭೇಟಿ ಸಂಶಯಾಸ್ಪದವಾಗಿದೆ ಎಂದು ವಾದ ಮಂಡಿಸಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು, ನಾಳೆ ಸಾರ್ವತ್ರಿಕ ರಜೆ ಹಿನ್ನೆಲೆ, ಗುರುವಾರ ಪೊಲೀಸ್ ಕಸ್ಟಡಿಗೆ ಪಡೆಯಲು ಸಿಸಿಬಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗುವುದು, 18 ಕೋಟಿ ರೂ. ಹಣವನ್ನ ಸ್ವಾಧೀನಕ್ಕೆ ಪಡೆಯಲು ಬಾಡಿ ವಾರೆಂಟ್ ಮೇಲೆ ಕಸ್ಟಡಿ ಪಡೆಯಲಾಗುದು ಎಂದು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews