Advertisements

ಎಲೆಕ್ಷನ್‍ನಲ್ಲಿ ಸ್ಪರ್ಧಿಸುವ ಯಾವುದೇ ನಿರ್ಧಾರ ಮಾಡಿಲ್ಲ: ಜನಾರ್ದನ ರೆಡ್ಡಿ

ರಾಯಚೂರು: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದರು.

Advertisements

ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸಿಂಧನೂರಿನಿಂದ ಸ್ಪರ್ಧೆ ವಿಚಾರ ನಮ್ಮ ಮುಂದೆಯಿಲ್ಲ. ನಾನು ಅಥವಾ ನನ್ನ ಶ್ರೀಮತಿ ಎಲೆಕ್ಷನ್‍ಗೆ ನಿಲ್ಲುವ ಯಾವುದೇ ನಿರ್ಧಾರ ಮಾಡಿಲ್ಲ ಎಂದ ಅವರು, ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸೋದಾಗಿ ಹೇಳಿದರು.

Advertisements

ಪಕ್ಷ ಏನೇ ನಿರ್ಧಾರ ಮಾಡಿದರೂ ಅದಕ್ಕೆ ಬದ್ಧನಾಗಿರುತ್ತೇನೆ ಎಂದ ಅವರು ಸಿಂಧನೂರಿನ ಗಾಂಧಿ ನಗರದ ಸ್ಪಟಿಕ ಲಿಂಗ ಮಹಾಗಿರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ. ರಾಜಕೀಯ ವಿಚಾರಕ್ಕಾಗಿ ಇಲ್ಲಿಗೆ ಬಂದಿಲ್ಲ. ಹೀಗಾಗಿ ರಾಜಕೀಯ ವಿಚಾರ ಮಾತನಾಡುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಾನು ಒಳ್ಳೆಯದನ್ನೂ ಮಾಡಿದ್ದೀನಿ, ಅದನ್ನೂ ತೋರಿಸಿ – ಕ್ಯಾಮೆರಾ ಮುಂದೆ ಕೈ ಮುಗಿದ ಕಿಂಗ್‍ಪಿನ್ ಆರ್.ಡಿ.ಪಾಟೀಲ್

ನನ್ನ ಸ್ನೇಹಿತರು, ನನ್ನ ಸಹೋದರನ ಸ್ನೇಹಿತರು ಗಾಂಧಿನಗರದಲ್ಲಿ ಹೆಚ್ಚಾಗಿದ್ದಾರೆ. ಹೀಗಾಗಿ ನಾನಿಲ್ಲಿ ಬಂದಿದ್ದೇನೆ. ರಾಜ್ಯದ ಎಲ್ಲಾ ಕಡೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಮಾತ್ರ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪತಿ ಆಸೆ ಈಡೇರಿಸಿದ ಪತ್ನಿ: ಹುತಾತ್ಮ ಯೋಧನ ಪತ್ನಿ ಈಗ ಲೆಫ್ಟಿನೆಂಟ್

Advertisements

Advertisements
Exit mobile version