Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ಯಾನರ್ ಗಲಾಟೆಗೆ ಜನಾರ್ದನ ರೆಡ್ಡಿ ಪ್ರತಿದೂರು – ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬ್ಯಾನರ್ ಗಲಾಟೆಗೆ ಜನಾರ್ದನ ರೆಡ್ಡಿ ಪ್ರತಿದೂರು – ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

Bellary

ಬ್ಯಾನರ್ ಗಲಾಟೆಗೆ ಜನಾರ್ದನ ರೆಡ್ಡಿ ಪ್ರತಿದೂರು – ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

Public TV
Last updated: January 3, 2026 8:45 am
Public TV
Share
2 Min Read
stone pelting in front of Reddys house over banner issue police lathi charge Ballari
SHARE

ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಹಾಗೂ ವಾಲ್ಮೀಕ ಪುತ್ಥಳಿಗೆ ಸಂಬಂಧ ನಡೆದ ಗಲಾಟೆ ವಿಚಾರವಾಗಿ ಶಾಸಕ ನಾರಾ ಭರತ್ ರೆಡ್ಡಿ (Nara Bharath Reddy) ಸೇರಿ ಹಲವರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

ಶುಕ್ರವಾರ (ಜ.2) ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸಮ್ಮುಖದಲ್ಲಿ ಗಂಗಾವತಿ (Gangavathi) ಶಾಸಕ ಜನಾರ್ದನ ರೆಡ್ಡಿ (Janardhana Reddy) ಹಾಗೂ ಬಿಜೆಪಿ ಕಾರ್ಯಕರ್ತ ನಾಗರಾಜ್ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜನಾರ್ದನ ರೆಡ್ಡಿ ಅವರು ಹಲ್ಲೆ ಹಾಗೂ ಕೊಲೆ ಯತ್ನ ಆರೋಪದ ಮೇಲೆ ಹಾಗೂ ಬಿಜೆಪಿ ಕಾರ್ಯಕರ್ತ ನಾಗರಾಜ್ ಅವರು ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪ ಮೇಲೆ ದೂರು ನೀಡಿದ್ದರು. ಇದನ್ನೂ ಓದಿ: Ballari Clash | ಘಟನಾ ಸ್ಥಳದಲ್ಲಿ ಇರದಿದ್ದಕ್ಕೆ ಎಸ್ಪಿ ಸಸ್ಪೆಂಡ್‌ ಮಾಡಿದ್ದೇನೆ – ಸಿಎಂ ಸಮರ್ಥನೆ

ಸ್ವತಃ ಎಎಸ್‌ಪಿ ರವಿಕುಮಾರ್ ಹಾಗೂ ಬ್ರೂಸ್‌ಪೇಟೆ ಠಾಣೆ ಪೊಲೀಸರು ಜನಾರ್ದನ ರೆಡ್ಡಿ ಮನೆಗೆ ಬಂದು ದೂರು ಸ್ವೀಕರಿಸಿದ್ದರು. ದೂರಿನನ್ವಯ ಶಾಸಕ ನಾರಾ ಭರತ್, ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ಹಾಗೂ ನಾರಾ ಸೂರ್ಯನಾರಾಯರೆಡ್ಡಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈಗಾಗಲೇ ಈ ಸಂಬಂಧ ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಬ್ರೂಸ್‌ಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಏನಿದು ಪ್ರಕರಣ?
ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಬೇಕಿದ್ದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಗುರುವಾರ (ಜ.1) ಒಂದು ಗುಂಪು ಮುಂದಾಗಿತ್ತು. ಈ ವೇಳೆ ಗಲಾಟೆ ಪ್ರಾರಂಭವಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದರು. ಉದ್ವಿಗ್ನ ವಾತಾವರಣ ನಿರ್ಮಾಣವಾದ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಬಂದಿದ್ದರು. ಈ ಸಂದರ್ಭದಲ್ಲಿ ಎರಡು ಕಡೆ ಮಾತಿನ ಚಕಮಕಿ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿ, ಜನರನ್ನು ಚದುರಿಸಿದ್ದರು.

ಪೊಲೀಸರು ಲಾಠಿ ಚಾರ್ಜ್ ಮಾಡಿದರೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು. ಈ ಸಂದರ್ಭದಲ್ಲಿ ಖಾಸಗಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿದ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಇನ್ನೂ ಭರತ್ ರೆಡ್ಡಿ ಬೆಂಬಲಿಗ ಸತೀಶ ರೆಡ್ಡಿಗೆ ಗಂಭೀರ ಗಾಯಗೊಂಡಿದ್ದರು. ಗಲಾಟೆ ವಿಕೋಪದ ಬಳಿಕ ಪೊಲೀಸರು ರೆಡ್ಡಿ ಮನೆಯ ಬಳಿ ನಿಷೇಧಾಜ್ಞೆ ಜಾರಿಗೊಳಿಸಿದ್ದರು.ಇದನ್ನೂ ಓದಿ: ಅಟ್ರಾಸಿಟಿ ಸೇರಿದಂತೆ ರೆಡ್ಡಿ ಮೇಲೆ 4 ಕೇಸ್‌ – ಎಲ್ಲದರಲ್ಲೂ A1 ಆರೋಪಿ

 

TAGGED:BallaryJanardhan ReddyNara Bharat ReddysriramuluValmiki Bannerಎಫ್‍ಐಆರ್ಜನಾರ್ದನ ರೆಡ್ಡಿನಾರಾ ಭರತ್ ರೆಡ್ಡಿಬಳ್ಳಾರಿವಾಲ್ಮೀಕಿ ಬ್ಯಾನರ್ಶ್ರೀರಾಮುಲು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
4 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
4 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
5 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
5 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
6 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?