ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಕಳೆದ ಹತ್ತು ವರ್ಷಗಳ ಬಳಿಕ ಬಳ್ಳಾರಿಗೆ ಕಾಲಿಟಿದ್ದಾರೆ. ಈ ಹಿಂದೆಯೇ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ್ದು, ಜಾಮೀನಿನ ಷರತ್ತುಗಳನ್ನು ಸಡಿಲಿಕೆ ಮಾಡಿ ಮತ್ತೊಂದು ಆದೇಶ ನೀಡಿದೆ. ಆದರೆ ಷರತ್ತು ಮೀರಿದರೆ ರೆಡ್ಡಿಗೆ ಮತ್ತೆ ಆಪತ್ತು ಕಾದಿದೆ.
ಈ ಹಿನ್ನೆಲೆಯಲ್ಲಿ ಕಳೆದ ಹತ್ತು ವರ್ಷಗಳ ಬಳಿಕ ರೆಡ್ಡಿ ಮತ್ತೆ ಹುಟ್ಟೂರಿಗೆ ಕಾಲಿಡುವಂತಾಗಿದೆ. ಆದರೆ ರೆಡ್ಡಿ ಗಣಿ ನಾಡು ಬಳ್ಳಾರಿಗೆ ಬಂದರೂ, ಅಭಿಮಾನಿಗಳಿಂದ, ಕಾರ್ಯಕರ್ತರಿಂದ ಅಂತರ ಕಾಯ್ದುಕೊಂಡಿದ್ದಾರೆ. ಕಾರಣ ಕೋರ್ಟ್ ವಿಧಿಸಿರುವ ಜಾಮೀನಿನ ಷರತ್ತುಗಳನ್ನು ಚಾಚೂ ತಪ್ಪದೇ ಪಾಲಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಜನಾರ್ದನ ರೆಡ್ಡಿ ಅವರು ಮುಂದಿನ ಎಂಟು ವಾರಗಳ ಕಾಲ ಗಪ್ ಚುಪ್ ಇರಲಿದ್ದಾರೆ. ಇದೇ ಕಾರಣಕ್ಕಾಗಿ ರೆಡ್ಡಿ ಎಲ್ಲರಿಂದಲೂ ಅಂತರ ಕಾಯ್ದುಕೊಂಡಿದ್ದಾರೆ. ಇದನ್ನೂ ಓದಿ: 10 ವರ್ಷಗಳ ಬಳಿಕ ಹುಟ್ಟೂರಿಗೆ ಬಂದಿದ್ದೇನೆ: ಜನಾರ್ದನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪ ಹೊತ್ತ ಜನಾರ್ದನ ರೆಡ್ಡಿ ಅವರು ಜೈಲು ಸೇರಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ. ಹೀಗಾಗಿ ಕೋರ್ಟ್ ವಿಧಿಸಿದ ಷರತ್ತು ಪಾಲನೆ ಮಾಡುವುದು ರೆಡ್ಡಿ ಮುಂದಿರುವ ದೊಡ್ಡ ಸವಾಲು, ಇದೇ ಕಾರಣಕ್ಕಾಗಿ ರೆಡ್ಡಿ ಎಲ್ಲರಿಂದಲೂ ಅಂತರ ಕಾಯ್ದುಕೊಳ್ಳಲು ನಿರ್ಧಾರ ಮಾಡಿದ್ದಾರೆ. ಒಂದು ವೇಳೆ ಈ ಎಂಟು ವಾರಗಳಲ್ಲಿ ಷರತ್ತುಗಳನ್ನು ಮೀರಿದ್ದೇ ಆದಲ್ಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ. ಹೀಗಾಗಿ ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಮನೆ ಹತ್ತಿರ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬಳ್ಳಾರಿಗೆ ಗೌಪ್ಯವಾಗಿ ಎಂಟ್ರಿ ಕೊಟ್ರು ಜನಾರ್ದನ ರೆಡ್ಡಿ – ಕುಟುಂಬಸ್ಥರ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಣೆ