ಕೊಪ್ಪಳ: ಚುನಾವಣೆ ಹೊಸ್ತಿಲಲ್ಲೇ ಕೆಆರ್ಪಿಪಿ (KRPP) ಸಂಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ದರ್ಗಾಗೆ ಭೇಟಿ ನೀಡಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಆತಂಕ ಸೃಷ್ಟಿಸಿದ್ದಾರೆ. ಮುಸ್ಲಿಂ (Muslim) ಮತ ಭೇಟೆಗೆ ರೆಡ್ಡಿ ಮತ್ತೊಂದು ದಾಳ ಉರುಳಿಸಿದ್ರಾ ಎಂಬ ಪ್ರಶ್ನೆ ಮೂಡಿದ್ದು, ರೆಡ್ಡಿ ನಡೆಯಿಂದ ಕಾಂಗ್ರೆಸ್ ಪಾಳಯದಲ್ಲೂ ಸಂಚಲನ ಮೂಡಿಸಿದೆ.
Advertisement
ಜನಾರ್ದನ ರೆಡ್ಡಿ ಪತ್ನಿ ಸಮೇತ ರಾಜಸ್ಥಾನದ (Rajasthan) ಅಜ್ಮೀರ್ ದರ್ಗಾಗೆ (Ajmer Dargah) ಭೇಟಿ ನೀಡಿದ್ದಾರೆ. ಅಜಮೀರ್ನಲ್ಲಿನ ಖಾಜಾ ಗರೀಬ್ ನವಾಜ್ ದರ್ಗಾಗೆ ತೆರಳಿ ಚಾದರ ಮತ್ತು ಹೂ ಸಮರ್ಪಣೆ ಮಾಡಿ, ವಿವಿಧ ಧಾರ್ಮಿಕ ವಿಧಿ-ವಿಧಾನ ಪೂರೈಸಿದ್ದಾರೆ. ವಿಶೇಷ ಪೂಜೆ ಸಲ್ಲಿಸಿರುವ ಜನಾರ್ದನ ರೆಡ್ಡಿ ಹಾಗೂ ಪತ್ನಿ ಲಕ್ಷ್ಮೀ ಅರುಣಾ, ನಾಡಿನ ಜನರ ನೆಮ್ಮದಿಯ ಜೀವನಕ್ಕಾಗಿ ಪ್ರಾರ್ಥಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲಿ ತ್ರಿ ಸದಸ್ಯ ಪೀಠದಲ್ಲಿ ಹಿಜಬ್ ಪ್ರಕರಣದ ವಿಚಾರಣೆ ನಡೆಸಲಾಗುವುದು: ಸಿಜೆಐ
Advertisement
Advertisement
ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಿರ್ಧರಿಸಿರುವ ಜನಾರ್ದನ ರೆಡ್ಡಿ, ಪತ್ನಿ ಲಕ್ಷ್ಮೀ ಅರುಣಾರನ್ನು ಬಳ್ಳಾರಿ ಅಥವಾ ಸಿಂಧನೂರು ಕ್ಷೇತ್ರದಿಂದ ಸ್ಪರ್ಧೆಗೆ ಇಳಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಹೊನ್ನಾ ನಾಯಕ ಮಾತಿಗೆ ತೀವ್ರ ಅಸಮಾಧಾನ- ಸಭೆ ಮಧ್ಯದಲ್ಲೇ ಹೊರಟು ಹೋದ ಶಾಸಕ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k