ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬಾಲಿವುಡ್ ಗಿಂತಲೂ ದಕ್ಷಿಣದಲ್ಲೇ ನೆಲೆಯೂರುವ ಎಲ್ಲ ಲಕ್ಷಣಗಳು ತೋರುತ್ತಿವೆ. ಈಗಾಗಲೇ ತೆಲುಗಿನಲ್ಲಿ ಅವರು ಜ್ಯೂನಿಯರ್ ಎನ್.ಟಿ.ಆರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಇದೀಗ ತೆಲುಗಿನ ರಾಮ್ ಚರಣ್ ನಟನೆಯ ಹೊಸ ಸಿನಿಮಾಗೂ ಜಾನ್ವಿ ಕಪೂರ್ (Janhvi Kapoor) ನಾಯಕಿ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೇ, ಸ್ಯಾಂಡಲ್ ವುಡ್ ಖ್ಯಾತ ನಟ ಶಿವರಾಜ್ ಕುಮಾರ್ ಕೂಡ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.
Advertisement
ಈಗಾಗಲೇ ಎರಡು ತಮಿಳು ಸಿನಿಮಾದಲ್ಲಿ ನಟಿಸಿರುವ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ (Shivaraj Kumar), ಇದೀಗ ತೆಲುಗು (Telugu) ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿತ್ತು. ತೆಲುಗಿನ ಹೆಸರಾಂತ ನಟ ರಾಮ್ ಚರಣ್ ನಟನೆಯ ಹೊಸ ಚಿತ್ರದಲ್ಲಿ ಶಿವಣ್ಣ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಸ್ವತಃ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.
Advertisement
Advertisement
ರಾಮ್ ಚರಣ್ (Ram Charan) ಜೊತೆಗಿನ ಸಿನಿಮಾ ಬಗ್ಗೆ ಮಾತನಾಡಿರುವ ಶಿವರಾಜ್ ಕುಮಾರ್, ‘ತೆಲುಗಿನಲ್ಲಿ ಆಫರ್ ಬಂದಿದ್ದು ನಿಜ. ರಾಮ್ ಚರಣ್ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ಬುಚ್ಚಿ ಬಾಬು ನನ್ನನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಆ ಸಿನಿಮಾ ಬಗ್ಗೆ ಸದ್ಯ ಏನೂ ಹೇಳಲಾರೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
Advertisement
ಒಂದು ವೇಳೆ ಆ ಸಿನಿಮಾದಲ್ಲಿ ಶಿವಣ್ಣ ನಟಿಸದೇ ಇದ್ದರೆ ಅಭಿಮಾನಿಗಳಿಗೆ ನಿರಾಸೆ ಆಗೋದು ಬೇಡ ಎನ್ನುವುದು ಚಿತ್ರದ ಬಗ್ಗೆ ಮಾತನಾಡದೇ ಇರುವುದಕ್ಕೆ ಕಾರಣವಂತೆ. ಮುಂದಿನ ದಿನಗಳಲ್ಲಿ ಚಿತ್ರ ತಂಡವೇ ಹಲವು ವಿಷಯಗಳನ್ನು ಹೇಳಬಹುದು ಎನ್ನುವುದು ಶಿವಣ್ಣ ಅವರ ಲೆಕ್ಕಾಚಾರ.
ಸದ್ಯ ಶಿವರಾಜ್ ಕುಮಾರ್ ಅವರು ತಮ್ಮ ತಮಿಳಿನ ಮತ್ತೊಂದು ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಧನುಷ್ ಜೊತೆ ಆಕ್ಟ್ ಮಾಡಿರೋ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಇದೇ ಸಂಕ್ರಾಂತಿಗೆ ಬಿಡುಗಡೆ ಆಗುತ್ತಿದೆ. ನಿನ್ನೆಯಷ್ಟೇ ಹಾಡು ಕೂಡ ರಿಲೀಸ್ ಆಗಿದೆ. ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಶಿವಣ್ಣ ಕೂಡ ಭಾಗಿಯಾಗಿದ್ದರು.