ಬಾಲಿವುಡ್ ನಟಿ ಶ್ರೀದೇವಿ ಕಪೂರ್ (Sridevi Kapoor) ಪುತ್ರಿ ಜಾನ್ವಿ ಕಪೂರ್ ಇದೀಗ ಸೌತ್‌ನತ್ತ ಮುಖ ಮಾಡಿದ್ದಾರೆ. ‘ದೇವರ’ ಜ್ಯೂ.ಎನ್‌ಟಿಆರ್‌ಗೆ (Shivarajkumar) ಹೀರೋಯಿನ್ ಆಗಿ ನಟಿಸಿದ ಬೆನ್ನಲ್ಲೇ ರಾಮ್ ಚರಣ್- ಶಿವಣ್ಣ ಕಾಂಬಿನೇಷನ್ ಸಿನಿಮಾಗೆ ಜಾನ್ವಿ ಕಪೂರ್ ನಾಯಕಿಯಾಗಿದ್ದಾರೆ. ಇದನ್ನೂ ಓದಿ:‘ನನ್ನಮ್ಮ ಸೂಪರ್ ಸ್ಟಾರ್-3’ನಲ್ಲಿ ತನಿಷಾ ಕುಪ್ಪಂಡ
ಬುಚ್ಚಿಬಾಬು ಸನಾ ನಿರ್ದೇಶನದ ಹೊಸ ಸಿನಿಮಾದಲ್ಲಿ ರಾಮ್ ಚರಣ್ (Ram Charan) ಜೊತೆ ಬಹುಮುಖ್ಯ ಪಾತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ಕೂಡ ನಟಿಸುತ್ತಿದ್ದಾರೆ. ರಾಮ್ ಚರಣ್ ಜೋಡಿಯಾಗಿ ಬಾಲಿವುಡ್ ಹಾಟ್ ಬ್ಯೂಟಿ ಜಾನ್ವಿ ಕಪೂರ್ ಕಾಣಿಸಿಕೊಳ್ತಾರೆ. ನಟನೆಗೆ ಹೆಚ್ಚು ಪ್ರಾಮುಖ್ಯತೆ ಇರುವ ಭಿನ್ನ ಪಾತ್ರದಲ್ಲಿ ನಟಿ ಕಾಣಿಸಿಕೊಳ್ತಿದ್ದಾರೆ.
Welcoming the celestial beauty on board for #RC16 ✨
Happy Birthday to the mesmerizing #JanhviKapoor ❤️????#RamCharanRevolts
Global Star @AlwaysRamCharan @BuchiBabuSana @arrahman @RathnaveluDop @artkolla @vriddhicinemas @SukumarWritings pic.twitter.com/DGT335D4no
— Mythri Movie Makers (@MythriOfficial) March 6, 2024
ಕೆಲ ತಿಂಗಳುಗಳ ಹಿಂದೆ ಬುಚ್ಚಿಬಾಬು ಸನಾ ಅವರು ಬೆಂಗಳೂರಿಗೆ ಆಗಮಿಸಿ ಶಿವಣ್ಣಗೆ ಭೇಟಿಯಾಗಿ ಕಥೆ ಹೇಳಿದ್ದರು. ಶಿವಣ್ಣಗೂ ಕಥೆ ಕೇಳಿ ಥ್ರಿಲ್ ಆಗಿ ಈ ಚಿತ್ರದ ಭಾಗವಾಗಲು ಓಕೆ ಎಂದಿದ್ದಾರೆ. ಸದ್ಯದಲ್ಲೇ ಸಿನಿಮಾ ಶುರುವಾಗಲಿದೆ.
ರಾಮ್ ಚರಣ್ ಮತ್ತು ಶಿವಣ್ಣ ಸಾಕಷ್ಟು ವರ್ಷಗಳಿಂದ ಪರಿಚಿತರು. ಇಬ್ಬರಿಗೂ ಉತ್ತಮ ಒಡನಾಟವಿದೆ. ಸಿನಿಮಾಗಾಗಿ ಮೊದಲ ಬಾರಿಗೆ ಜೊತೆಯಾಗ್ತಿರೋದ್ರಿಂದ ಶಿವಣ್ಣ- ಚರಣ್ ಕಾಂಬೋ ನೋಡಲು ಫ್ಯಾನ್ಸ್ಗೆ ಕಾಯ್ತಿದ್ದಾರೆ.