ಬಾಲಿವುಡ್ನ (Bollywood) ಸ್ಟಾರ್ ನಟಿ ಶ್ರೀದೇವಿ (Sridevi kpoor) ಅವರ ಪುತ್ರಿ ಜಾನ್ವಿ ಕಪೂರ್ ಸೌತ್ ಸಿನಿಮಾರಂಗದತ್ತ ಮುಖ ಮಾಡಿದ್ದಾರೆ. ಜ್ಯೂನಿಯರ್ ಎನ್ಟಿಆರ್ಗೆ (Jr.Ntr) ನಾಯಕಿಯಾಗಿ ನಟಿಸಲು ಜಾನ್ವಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.
- Advertisement 2
`ದಢಕ್’ (Dhadak) ಸಿನಿಮಾದ ಮೂಲಕ ಬಾಲಿವುಡ್ಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿರುವ ಜಾನ್ವಿ ಕಪೂರ್ (Janhavi Kapoor) ಹಲವು ಬಗೆಯ ಪಾತ್ರಗಳ ಮೂಲಕ ಕಾಣಿಸಿಕೊಂಡರು. ನಟಿ ಶ್ರೀದೇವಿ ಕೂಡ ಬಹುಭಾಷಾ ನಟಿಯಾಗಿ ಸೈ ಎನಿಸಿಕೊಂಡಿದ್ದರು. ಈಗ ಅಮ್ಮನ ಹಾದಿಯನ್ನೇ ಜಾನ್ವಿ ಕೂಡ ಫಾಲೋವ್ ಮಾಡ್ತಿದ್ದಾರೆ. ಸೌತ್ ರಂಗದತ್ತ ನಟಿ ಮುಖ ಮಾಡ್ತಿದ್ದಾರೆ. ಇದನ್ನೂ ಓದಿ: ದಿವ್ಯಾಳ ಆಸೆಯಂತೆ ದೊಡ್ಮನೆಗೆ ಎಂಟ್ರಿ ಕೊಟ್ಟ ಅರವಿಂದ್ ಕೆ.ಪಿ
- Advertisement 3
- Advertisement 4
`ಎನ್ಟಿಆರ್ 30′ (Ntr 30) ಚಿತ್ರಕ್ಕೆ ಜಾನ್ವಿ ಕಪೂರ್ (Janhavi Kapoor) ನಾಯಕಿ ಎಂಬ ಮಾತುಗಳು ಕೇಳಿ ಬರುತ್ತಿದೆ. ಸಾಕಷ್ಟು ಸಂದರ್ಶನಗಳಲ್ಲಿ ಜಾನ್ವಿ ತೆಲುಗಿನಲ್ಲಿ ನಟಿಸುವ ಬಗ್ಗೆ ಮಾತನಾಡಿದ್ದರು. ಜ್ಯೂನಿಯರ್ ಎನ್ಟಿಆರ್ ನಟನೆ ಅಂದ್ರೆ ಇಷ್ಟ ಎಂದು ಕೂಡ ಹೇಳಿದ್ದರು. ಈ ಎಲ್ಲಾ ವಿಚಾರಗಳು ಇದೀಗ ಸದ್ದು ಮಾಡುತ್ತಿದೆ. ಕೊರಟಾಲ ಶಿವ (Kortala Shiva) ನಿರ್ದೇಶನದ ಸಿನಿಮಾದಲ್ಲಿ ತಾರಕ್ಗೆ ಜಾನ್ವಿ ನಾಯಕಿ ಎಂಬ ಸುದ್ದಿ ಟಾಲಿವುಡ್ನಲ್ಲಿ ಸೌಂಡ್ ಮಾಡುತ್ತಿದೆ.
ಈ ಚಿತ್ರದ ಮೂಲಕ ಜಾನ್ವಿ ಕಪೂರ್ ಕೂಡ ಸೌತ್ ಸಿನಿರಂಗದಲ್ಲಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಬಾಲಿವುಡ್ನಲ್ಲಿ ಅಷ್ಟೇನು ಸಕ್ಸಸ್ ಕಾಣದ ನಟಿ ತೆಲುಗು ರಂಗದಲ್ಲಿ ನಾಯಕಿಯಾಗಿ ಗೆಲ್ಲುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.