‘ಪುಷ್ಪ’ಗಾಗಿ ಐಟಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಜಾಹ್ನವಿ ಕಪೂರ್

Public TV
2 Min Read
Janhvi Kapoor 5

ಪುಷ್ಪ 2 ಚಿತ್ರದ ಅಡ್ಡಾದಿಂದ ಲೇಟೆಸ್ಟ್ ಸುದ್ದಿಯೊಂದು ಹರಿದಾಡುತ್ತಿದೆ. ಈ ಸಿನಿಮಾದ ಮಾದಕ ಗೀತೆ (Item Dance_ ಬಾಲಿವುಡ್ ನಟಿ ಜಾಹ್ನವಿ ಕಪೂರ್ (Jahnavi Kapoor) ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗಿತ್ತು. ಈ ಹಿಂದೆ ನಾನಾ ನಾಯಕಿಯರ ಹೆಸರು ಇದೇ ಹಾಡಿಗೆ ಕೇಳಿ ಬಂದಿತ್ತು. ಆದರೆ, ಇದೀಗ ಜಾಹ್ನವಿ ಹೆಸರು ಓಡಾಡುತ್ತಿದೆ. ಅವರು ಡಾನ್ಸ್ ಮಾಡಿದ ನಂತರವೇ ಪಕ್ಕಾ ಆಗುವುದು.

Janhvi Kapoor 1

ಈ ನಡುವೆ ಚಿತ್ರದ ಬಜೆಟ್ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಕಾರಣ ಬಜೆಟ್ ತುಂಬಾನೇ ಏರಿಕೆ ಆಗಿದೆಯಂತೆ. ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 ಸಿನಿಮಾ ಕುರಿತಂತೆ ಅಚ್ಚರಿಯ ಸಂಗತಿಗಳು ಹೊರ ಬೀಳುತ್ತಲೇ ಇವೆ. ಪ್ರತಿ ಬಾರಿಯೂ ಅವುಗಳೆಲ್ಲ ಕಟ್ಟುಕಥೆಗಳೇ ಇರುತ್ತಿದ್ದವು. ಇದೀಗ ಸ್ವತಃ ಸಿನಿಮಾದ ನಿರ್ದೇಶಕ ಸುಕುಮಾರನ್ (Sukumaran)  ಮಾತನಾಡಿದ್ದಾರೆ. ಸಿನಿಮಾ ಕುರಿತಂತೆ ಹಲವಾರು ವಿಷಯಗಳನ್ನು ಅವರು ಹಂಚಿಕೊಂಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಚಿತ್ರ ಬಜೆಟ್ ಬಗ್ಗೆ ಮಾತನಾಡಿದ್ದಾರೆ.

pushpa 2 2

ಪುಷ್ಪ ಸಿನಿಮಾಗಿಂತ ಪುಷ್ಪ 2 ಸಿನಿಮಾದ ಬಜೆಟ್ ಡಬಲ್ ಆಗಿದೆಯಂತೆ. ಜೊತೆಗೆ ಅಷ್ಟೇ ಶ್ರೀಮಂತಿಕೆಯಿಂದ ಕೂಡಿದೆಯಂತೆ. ಫಹಾದ್ ಫಾಸಿಲ್ (Fahadh Faasil) ಮತ್ತು ಅಲ್ಲು ಅರ್ಜುನ್ ನಡುವಿನ ದೃಶ್ಯ ಮತ್ತೊಂದು ಲೆವಲ್ ನಲ್ಲಿ ಇದೆ ಎಂದಿದ್ದಾರೆ ನಿರ್ದೇಶಕ ಸುಕುಮಾರನ್. ಇಡೀ ಕಥೆಯನ್ನು ಈ ಇಬ್ಬರೂ ನಟರು ಹೇಗೆ ತೂಗಿಸಿಕೊಂಡು ಹೋಗಿದ್ದಾರೆ ಎನ್ನುವುದನ್ನು ವಿವರಿಸಿದ್ದಾರೆ.

pushpa 2 1

ಒಂದು ಕಡೆ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ಇನ್ನೊಂದು ಕಡೆ ‘ಪುಷ್ಪ 2’ (Pushpa 2) ಸಿನಿಮಾದ ಆಡಿಯೋ (Audio) ಹಕ್ಕು (Right) ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆಯಂತೆ. ಈವರೆಗೂ ದಾಖಲಾಗಿದ್ದ ಎಲ್ಲ ಮೊತ್ತವನ್ನೂ ಅದು ಹಿಂದಿಕ್ಕಿದ್ದು ಟಿ ಸೀರಿಸ್ ಕಂಪೆನಿಯು 65 ಕೋಟಿ ರೂಪಾಯಿ ಹಣ ನೀಡಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ ಎಂದು ವರದಿಯಾಗಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಸೇರಿದಂತೆ ರಿಲೀಸ್ ಆಗುವ ಅಷ್ಟು ಭಾಷೆಗಳಿಗೆ ಈ ಹಕ್ಕು ಅನ್ವಯಿಸಲಿದೆ.

 

ಈ ಹಿಂದೆ ರಿಲೀಸ್ ಆಗಿರುವ ಬಾಹುಬಲಿ ಚಿತ್ರದ ಆಡಿಯೋ ಹಕ್ಕು ಹತ್ತು ಕೋಟಿ ಸೇಲ್ ಆಗಿತ್ತು. ಆರ್.ಆರ್.ಆರ್ ಆಡಿಯೋ ಹಕ್ಕು 25 ಕೋಟಿಗೆ ಬಿಕರಿ ಆಗಿತ್ತು. ಸಾಹೋ ಸಿನಿಮಾದ ಆಡಿಯೋ ಹಕ್ಕು ಕೂಡ 22 ಕೋಟಿಗೆ ಸೇಲ್ ಆಗಿತ್ತು. ಈ ಎಲ್ಲ ದಾಖಲೆಗಳನ್ನೂ ಪುಷ್ಪ 2 ಸಿನಿಮಾ ಮುರಿದಿದೆ. ಅಲ್ಲದೇ, ಓಟಿಟಿಗೂ ಭಾರೀ ಮೊತ್ತಕ್ಕೆ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ.

Share This Article