– 1,000ಕ್ಕೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ
– ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ವಿವರ ತಿಳಿಸಿದ ಎಂಬಿಪಿ
ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ (MB Patil) ಅವರ ನೇತೃತ್ವದಲ್ಲಿನ ಕರ್ನಾಟಕದ (Karnataka) ಉನ್ನತ ಮಟ್ಟದ ನಿಯೋಗವು ಜಪಾನ್ (Japan) ಮತ್ತು ದಕ್ಷಿಣ ಕೊರಿಯಾದ (South Korea) ಎರಡು ವಾರಗಳ ಭೇಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು 6,450 ಕೋಟಿ ರೂ. ಮೊತ್ತದ ಬಂಡವಾಳ (Investment) ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ. ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ 1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.
ಉಭಯ ದೇಶಗಳ ಭೇಟಿಯ ಫಲಶ್ರುತಿ ಬಗ್ಗೆ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ಹಂಚಿಕೊಂಡ ಸಚಿವರು, ಜೂನ್ 24 ರಿಂದ ಜುಲೈ 5 ರವರೆಗಿನ ಉಭಯ ದೇಶಗಳ ಎರಡು ವಾರಗಳ ಭೇಟಿಯ ಸಮಯದಲ್ಲಿ, ಕರ್ನಾಟಕದ ನಿಯೋಗವು ಅಲ್ಲಿನ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (SME) ಬಂಡವಾಳ ಹೂಡಿಕೆ ರೋಡ್‌ಷೋಗಳನ್ನು ನಡೆಸಿತು. ತಯಾರಿಕಾ ವಲಯಕ್ಕೆ ರಾಜ್ಯದಲ್ಲಿ ಇರುವ ಉತ್ತೇಜಕರ ಪೂರಕ ಸೌಲಭ್ಯಗಳ ಮಾಹಿತಿ ವಿನಿಮಯ ಮಾಡಿಕೊಂಡಿತುʼ ಎಂದು ಹೇಳಿದರು.
???????????????????? ???????????????? ???????? ???????????????????????? ???????????????????????????????????? ???????????????????????????????????????? ???????? ???????????????????? ???????????? ???????????????????? ????????????????????
Our #InvestKarnataka delegation returned from a triumphant two-week mission to Japan and South Korea, securing INR 6,450 crore in investments and MoUs poised… pic.twitter.com/7eXVxFduJD
— M B Patil (@MBPatil) July 10, 2024
35 ಉದ್ಯಮಗಳ ಪ್ರಮುಖರನ್ನು ಭೇಟಿ ಮಾಡಿದ ನಿಯೋಗವು, ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ – ʼಇನ್ವೆಸ್ಟ್ ಕರ್ನಾಟಕ 2025ʼರಲ್ಲಿ ಭಾಗವಹಿಸಲು ಟೋಕಿಯೋ ಮತ್ತು ಸಿಯೋಲ್‌ನಲ್ಲಿ ನಡೆದ ರೋಡ್ ಶೋಗಳಲ್ಲಿ 200ಕ್ಕೂ ಹೆಚ್ಚು ಕಂಪನಿಗಳಿಗೆ ಆಹ್ವಾನ ನೀಡಲಾಯಿತು ಎಂದರು.
ಜಪಾನ್‌ನಲ್ಲಿ ನಡೆದ ಸಭೆಗಳಲ್ಲಿ ರೆನೆಸಾಸ್ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್, ಟೊಯೊಟಾ ಮೋಟರ್ ಕಾರ್ಪೊರೇಷನ್, ಯಮಹಾ ಮೋಟರ್ ಕಂಪನಿ, ಸುಮಿಟೊಮೊ ಹೆವಿ ಇಂಡಸ್ಟ್ರೀಸ್, ಪ್ಯಾನಾಸೋನಿಕ್ ಎನರ್ಜಿ, ನಿಡೆಕ್ ಕಾರ್ಪೊರೇಷನ್, ನಿಸಾನ್ ಮೋಟರ್ ಕಾರ್ಪೊರೇಷನ್, ಬ್ರದರ್ ಇಂಡಸ್ಟ್ರೀಸ್, ಶಿಮಾಡ್ಜು ಕಾರ್ಪೊರೇಷನ್, ಹಿಟಾಚಿ ಮತ್ತಿತರ ಕಂಪನಿಗಳು ಪ್ರಮುಖವಾಗಿವೆ. ಇದನ್ನೂ ಓದಿ: ಮಹಿಳೆಯಿಂದ ಪುರುಷನಾದ ಐಆರ್‌ಎಸ್ ಅಧಿಕಾರಿ – ಲಿಂಗ, ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ
Karnataka Forges Ahead in Industrial Collaboration with South Korea
Our recent delegation to South Korea has proven highly successful, solidifying the state’s industrial ties with the nation. The visit facilitated significant investments across diverse sectors, encompassing… pic.twitter.com/F5QIpS8tft
— M B Patil (@MBPatil) July 9, 2024
ದಕ್ಷಿಣ ಕೊರಿಯಾದಲ್ಲಿ ವ್ಯಾಪಾರ, ಕೈಗಾರಿಕೆ ಮತ್ತು ಇಂಧನ ಸಚಿವಾಲಯದ ಉಪ ಮಂತ್ರಿ, ಕೊರಿಯಾದ ಜಿಯೊಂಗಿ ಪ್ರಾಂತ್ಯದ ವೈಸ್ ಗವರ್ನರ್ ಮತ್ತು ಸೋಲ್ ಮೆಟ್ರೊಪಾಲಿಟನ್ ಸರ್ಕಾರದಲ್ಲಿ ಆರ್ಥಿಕ ನೀತಿಯ ಉಪ ಮೇಯರ್ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಸಭೆಗಳನ್ನು ನಡೆಸಲಾಯಿತು.
ದಕ್ಷಿಣ ಕೊರಿಯಾದಲ್ಲಿ ನಡೆದ ಸಭೆಗಳಲ್ಲಿ ಸ್ಯಾಮ್‌ಸ್ಯಂಗ್ ಎಲೆಕ್ಟ್ರಾನಿಕ್ಸ್, ಎಲ್‌ಜಿ ಎನರ್ಜಿ ಸೊಲ್ಯೂಷನ್ಸ್, ಎಲ್‌ಎಕ್ಸ್ ಎಲೆಕ್ಟ್ರಾನಿಕ್ಸ್, ನಿಫ್ಕೊ ಕೊರಿಯಾ, ಒಸಿಐ ಹೋಲ್ಡಿಂಗ್ಸ್, ಕ್ರಾಫ್ಟನ್, ಎಚ್‌ವೈಎಸಿ, ಹುಂಡೈ ಮೋಟರ್ಸ್, ವೈಜಿ-1, ಹೊಯ್ಸಂಗ್ ಅಡ್ವಾನ್ಸಡ್ ಮಟೇರಿಯಲ್ಸ್ ಮುಂತಾದವು ಸೇರಿವೆ ಎಂದು ಎಂಬಿಪಿ ವಿವರಿಸಿದರು. ಇದನ್ನೂ ಓದಿ: ಮಹಿಳೆ ಕಿಡ್ನ್ಯಾಪ್ ಕೇಸ್ – ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
ದಕ್ಷಿಣ ಕೊರಿಯಾ ಪ್ರವಾಸ; ಹೂಡಿಕೆ ವೃದ್ಧಿಸುವ ನಮ್ಮ ಪ್ರಯತ್ನ ಯಶಸ್ವಿ!
ವ್ಯಾಪಾರ ವಿಸ್ತರಣೆಗೆ LX ಇಂಟರ್ ನ್ಯಾಷನಲ್ ಆಸಕ್ತಿ
ಬೃಹತ್ ಹೂಡಿಕೆಗೆ ಸ್ಯಾಮ್ ಸಂಗ್ ಒಲವು!#InvestKarnataka2025 #GIM2025 #ReimaginingGrowth #Karnataka#KarnatakaDelegationAtSouthKorea pic.twitter.com/oLNx9MZinb
— M B Patil (@MBPatil) July 8, 2024
ಹೂಡಿಕೆ ಬದ್ಧತೆಗಳು ಮತ್ತು ಒಪ್ಪಂದಗಳ ವಿವರ
ಒಸಾಕಾ ಗ್ಯಾಸ್: ಜಪಾನಿನ ಪ್ರಮುಖ ಇಂಧನ ಕಂಪನಿಯಾಗಿರುವ ಒಸಾಕಾ ಗ್ಯಾಸ್, ಮುಂದಿನ 5 ವರ್ಷಗಳಲ್ಲಿ ಅನಿಲ ವಿತರಣಾ ಮೂಲಸೌಲಭ್ಯ ವಿಸ್ತರಿಸಲು 5000 ಕೋಟಿ ರೂ. (600 ದಶಲಕ್ಷ ಡಾಲರ್) ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ತೋರಿದೆ.
ಡಿಎನ್ ಸೊಲ್ಯೂಷನ್ಸ್: ಕೊರಿಯಾದ ಮಷಿನ್ ಟೂಲ್ಸ್ ಕಂಪನಿಯಾಗಿರುವ ಡಿಎನ್ ಸೊಲ್ಯೂಷನ್ಸ್, ಕೈಗಾರಿಕಾ ಯಂತ್ರೋಪಕರಣಗಳು ಮತ್ತು ಸ್ವಯಂಚಾಲಿತ ವ್ಯವಸ್ಥೆಗಳ ತಯಾರಿಕಾ ಘಟಕ ಸ್ಥಾಪಿಸಲು 1000 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.
ಅವೊಯಮಾ ಸೈಸಕುಶೊ : ವಾಹನ ಬಿಡಿಭಾಗಗಳನ್ನು ಪೂರೈಸುವ ಜಪಾನಿನ ಅವೊಯಮಾ ಸೈಸಕುಶೊ, ತುಮಕೂರು ಬಳಿಯ ಜಪಾನ್ ಕೈಗಾರಿಕಾ ಟೌನ್‌ಶಿಪ್‌ನಲ್ಲಿ ತಯಾರಿಕಾ ಘಟಕ ಸ್ಥಾಪಿಸಲು 210 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.
ಕೊರಿಯಾ ಪ್ರವಾಸದ ಗಳಿಕೆ – ರಾಜ್ಯಕ್ಕೆ ಬಂತು ಹೆಚ್ಚಿನ ಹೂಡಿಕೆ
2025ರಲ್ಲಿ ಬೆಂಗಳೂರಿನಲ್ಲಿ KEB ಹಾನಾ ಬ್ಯಾಂಕ್ ಶಾಖೆ ಆರಂಭ
ಕ್ರಾಫ್ಟನ್ ಗೇಮಿಂಗ್ ಕಂಪೆನಿ; ರೂ. 1,245 ಕೋಟಿ ಹೂಡಿಕೆಗೆ ಆಸಕ್ತಿ
ಆಟೋ ಬಿಡಿಭಾಗಗಳ ತಯಾರಿಕಾ ಘಟಕ ಸ್ಥಾಪನೆಗೆ HYAC ಕಂಪೆನಿ ಒಲವು
ಸಿಯೋಲ್ ಮೇಯರ್ ಅವರೊಂದಿಗೆ ಹೂಡಿಕೆಗಿರುವ ಅವಕಾಶಗಳ ಕುರಿತು ಚರ್ಚೆ
ಜಿಯೊಂಗಿ… pic.twitter.com/rze1ZVjSF7
— M B Patil (@MBPatil) July 7, 2024
ಡೈಕಿ ಆ್ಯಕ್ಸಿಸ್, ಹೈವಿಷನ್ ಮತ್ತು ಇಎಂಎನ್‌ಐ ಕಂಪನಿ ಲಿಮಿಟೆಡ್ : ಬ್ಯಾಟರಿ ಸೆಲ್‌ಗಳ ಸಂಗ್ರಹ ಮತ್ತು ಪರೀಕ್ಷಾ ಕೇಂದ್ರ ಹಾಗೂ ಪರಿಸರ ಸಂರಕ್ಷಣೆ ಸಲಕರಣೆ ತಯಾರಿಸುವ ಘಟಕ ಸ್ಥಾಪಿಸಲು ಜಂಟಿಯಾಗಿ 210 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿವೆ.
ಸುಮಿಟೊಮೊ ಹೆವಿ ಇಂಡಸ್ಟ್ರೀಸ್ (ಎಸ್‌ಎಚ್‌ಐ) ಬೆಂಗಳೂರಿನಲ್ಲಿ ತನ್ನ ಮುಖ್ಯ ಕಚೇರಿಯನ್ನು ತೆರೆಯಲು ಸಜ್ಜಾಗಿದ್ದು, 2024ರ ಅಂತ್ಯಕ್ಕೆ ಉದ್ಘಾಟನೆ ನೆರವೇರಿಸಲು ಉದ್ದೇಶಿಸಿದೆ.
ಈ ತಕ್ಷಣದ ಹೂಡಿಕೆಗಳನ್ನು ಹೊರತುಪಡಿಸಿ, ವಾಹನ ತಯಾರಿಕೆ, ಎಲೆಕ್ಟ್ರಾನಿಕ್ಸ್ ಮತ್ತು ಇಂಧನ ಪರಿಹಾರ ವಲಯಗಳಲ್ಲಿ 25,000 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನೂ ರಾಜ್ಯದ ನಿಯೋಗವು ಗುರುತಿಸಿದೆ. ಈ ಹೂಡಿಕೆ ನಿರೀಕ್ಷೆಯು, ಕರ್ನಾಟಕವು ಜಾಗತಿಕ ಹೂಡಿಕೆದಾರರ ಪಾಲಿಗೆ ಆಕರ್ಷಕ ತಾಣವಾಗಿರುವುದರ ಮಹತ್ವವನ್ನು ಸೂಚಿಸುತ್ತದೆ.
ಕರ್ನಾಟಕದಲ್ಲಿ ವಹಿವಾಟು ವಿಸ್ತರಣೆಯ ಅನ್ವೇಷಣೆಯಲ್ಲಿ ಸ್ಯಾಮ್ ಸಂಗ್
ಎಲೆಕ್ಟ್ರಾನಿಕ್ಸ್!
ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ನ ಪ್ರಮುಖರೊಂದಿಗೆ ಕರ್ನಾಟಕದಲ್ಲಿ ಅವರ ಸಂಭಾವ್ಯ ವಿಸ್ತರಣೆ, ಹಾಗೂ ವ್ಯಾಪಕ ಅವಕಾಶಗಳ ಕುರಿತು ಚರ್ಚಿಸಿದೆ. ಸೆಮಿಕಂಡಕ್ಟರ್ , ಬ್ಯಾಟರಿ ಸೆಲ್ ತಯಾರಿಕೆ, ಎಲೆಕ್ಟ್ರಿಕ್ ವೆಹಿಕಲ್ (ಇವಿ), ಸ್ಮಾರ್ಟ್‌ಫೋನ್,… pic.twitter.com/l5YJZ3zJNa
— M B Patil (@MBPatil) July 5, 2024
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ, ಮೂಲಸೌಕರ್ಯ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಈ ಸಂದರ್ಭದಲ್ಲಿ ಇದ್ದರು.