ನವದೆಹಲಿ: ವ್ಯಾಪಾರ, ಹೂಡಿಕೆ ಮತ್ತು ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ವಿಸ್ತರಿಸುವ ಉದ್ದೇಶದಿಂದ ಜಪಾನ್ ಪ್ರಧಾನಿ ಸನೇ ತಕೈಚಿ (Sanae Takaichi) ಮುಂದಿನ ವಾರ ಭಾರತಕ್ಕೆ ಮೂರು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಆಹ್ವಾನದ ಮೇರೆಗೆ, 16 ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ತಕೈಚಿ ಜುಲೈ 1 ರಿಂದ 3 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ತಿಳಿಸಿದೆ. ಇದನ್ನೂ ಓದಿ: ವೆನೆಜುವೆಲಾ ಅವಳಿ ಭೂಕಂಪ; ಮೃತರ ಸಂಖ್ಯೆ 235ಕ್ಕೆ ಏರಿಕೆ, 1,500ಕ್ಕೂ ಹೆಚ್ಚು ಮಂದಿಗೆ ಗಾಯ
ಈ ಶೃಂಗಸಭೆಯು ಎರಡೂ ಕಡೆಯವರಿಗೆ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಹಾಗೂ ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶವನ್ನು ಒದಗಿಸುತ್ತದೆ ಎಂದು ಎಂಇಎ ಹೇಳಿದೆ.
ಇದು ಪ್ರಧಾನಿ ತಕೈಚಿ ಅವರ ಭಾರತದ ಮೊದಲ ಅಧಿಕೃತ ಭೇಟಿಯಾಗಲಿದೆ. 2025ರ ಆಗಸ್ಟ್‌ನಲ್ಲಿ 15 ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಗಾಗಿ ಪ್ರಧಾನಿ ಮೋದಿಯವರು ಟೋಕಿಯೊಗೆ ಭೇಟಿ ನೀಡಿದ್ದರು. ಇದನ್ನೂ ಓದಿ: ಬೀಜಿಂಗ್‌ನ ಎತ್ತರದ ಕಟ್ಟಡಕ್ಕೆ ಅಪ್ಪಳಿಸಿದ ಚೀನಾ ವಿಮಾನ – ತುಂಡುಗಳಾಗಿ ನೆಲಕ್ಕೆ ಬಿದ್ದ ಫ್ಲೈಟ್, ವಿಡಿಯೋ ವೈರಲ್
