ಭಾರತದಲ್ಲಿ ಮುಂದಿನ ಐದು ವರ್ಷಗಳಲ್ಲಿ ಜಪಾನ್ 3.2 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ: ಮೋದಿ

Public TV
1 Min Read
NARENDRA MODI AND JAPAN PM

ನವದೆಹಲಿ: ಜಪಾನ್ ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ 3.2 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

NARENDRA MODI AND JAPAN PM 1

ಇಂದಿನಿಂದ ಆರಂಭವಾದ ಭಾರತ-ಜಪಾನ್ ಆರ್ಥಿಕ ಶೃಂಗಸಭೆಯ ಕುರಿತಾಗಿ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋದಿ, ವಿಶ್ವ ಕೊರೊನಾ ಮಹಾಮಾರಿಯ ಹೊಡೆತದಿಂದ ಮೇಲೆದ್ದು ಇದೀಗ ಅಭಿವೃದ್ಧಿಯತ್ತ ಸಾಗುತ್ತಿದೆ. ಜಾಗತಿಕ ಆರ್ಥಿಕತೆ ಮತ್ತೆ ಪ್ರಗತಿಯತ್ತ ಮುನ್ನುಗ್ಗುತ್ತಿದೆ. ಇದೀಗ ಪ್ರಗತಿ, ಸೌಹಾರ್ದತೆ ಮತ್ತು ಪಾಲುದಾರಿಕೆ ಭಾರತ-ಜಪಾನ್ ಸಂಬಂಧದ ಮೂಲ ವಾಗುತ್ತಿದೆ ಎಂದರು. ಇದನ್ನೂ ಓದಿ: ಕೋಲಾರದ ಕ್ಲಾಕ್ ಟವರ್ ಮೇಲೆ 74 ವರ್ಷಗಳ ಬಳಿಕ ರಾರಾಜಿಸಿದ ತ್ರಿವರ್ಣ ಧ್ವಜ

ಭಾರತದಲ್ಲಿ ದೊಡ್ಡ ಹೂಡಿಕೆಯ ರಾಷ್ಟ್ರಗಳಲ್ಲಿ ಜಪಾನ್ ಕೂಡ ಒಂದಾಗಿದ್ದು, ಮುಂಬೈ-ಅಹಮದಾಬಾದ್ ಹೈ ಸ್ಪೀಡ್ ರೈಲು ಕಾರಿಡಾರ್‌ನ ಒನ್ ಟೀಮ್-ಒನ್ ಪ್ರಾಜೆಕ್ಟ್ ರೀತಿಯಲ್ಲಿ ಭಾರತ-ಜಪಾನ್ ಕಾರ್ಯನಿರ್ವಹಿಸುತ್ತಿದೆ. ಭಾರತದೊಂದಿಗೆ ಸೈಬರ್ ಭದ್ರತೆಯಲ್ಲಿ ಸಹಕಾರದ ಜಪಾನ್‍ನ ಒಪ್ಪಂದವನ್ನು ನಾವು ಸ್ವಾಗತಿಸುತ್ತೇವೆ. ಶೀಘ್ರದಲ್ಲಿಯೇ ಈ ಬಗ್ಗೆ ಮುಂದಿನ ಮಾತುಕತೆ ನಡೆಸುತ್ತೇವೆ. ಭಾರತ ಜಪಾನಿನ ಅತ್ಯಂತ ಪ್ರಮುಖ ಪಾಲುದಾರ ರಾಷ್ಟ್ರವಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇವೆ: ಶ್ರೀರಾಮುಲು

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಮಾತನಾಡಿ, ಭಾರತದೊಂದಿಗೆ ಸೇರಿ ಉಕ್ರೇನ್‍ನಲ್ಲಿ ನಡೆಯುತ್ತಿರುವ ರಷ್ಯಾ-ಉಕ್ರೇನ್ ನಡುವಿನ ಯುದ್ಧ ನಿಲ್ಲಿಸಲು ಪ್ರಯತ್ನಿಸುತ್ತೇವೆ. ಉಕ್ರೇನ್ ಮತ್ತು ಅದರ ನೆರೆಯ ರಾಷ್ಟ್ರಗಳಿಗೆ ನೆರವು ನೀಡಲು ಸಹಕರಿಸುತ್ತೇವೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *