ಟೋಕಿಯೋ: ಜಪಾನ್‍ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ದುಷ್ಕರ್ಮಿಗಳಿಂದ ಗುಂಡೇಟು ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಪಾನ್ ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗಲೇ ಶಿಂಜೋ ಅಬೆಗೆ ಗುಂಡೇಟು ಬಿದ್ದಿದೆ. ಭಾಷಣ ಮಾಡುತ್ತಿರುವಾಗ ಶಿಂಜೋ ಅಬೆ ಎದೆಗೆ ಗುಂಡು ತಾಗಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಜಪಾನ್ ಕಾಲಮಾನ ಬೆಳಗ್ಗೆ 11 ಗಂಟೆಗೆ ಘಟನೆ ನಡೆದಿದೆ. ಇದನ್ನೂ ಓದಿ: ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ
ಶಿಂಜೋ ಅಬೆ ಎರಡು ಬಾರಿ ಜಪಾನ್ ಪ್ರಧಾನಿಯಾಗಿದ್ದರು. ಈ ಹಿಂದೆ ಭಾರತಕ್ಕೂ ಕೂಡ ಶಿಂಜೋ ಅಬೆ ಭೇಟಿ ನೀಡಿದ್ದರು. ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಅತ್ಯಾಪ್ತರಾಗಿದ್ದರು. ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ