ಬೆಂಗಳೂರು: ಪಂಚರಾಜ್ಯ ಚುನಾವಣೆಗಳ ಬಳಿಕ ಬಿಜೆಪಿ ಆಪರೇಷನ್ ಕಮಲ ಕೈಬಿಟ್ಟಿದೆ ಎಂಬ ಮಾತಿನ ನಡುವೆಯೇ ಮತ್ತೆ ಆಪರೇಷನ್ ಕಮಲ ಮಾಡುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದು, ಮಾಜಿ ಸಚಿವ ಹಾಗೂ ಹಾಲಿ ಸಚಿವ ಜಾರಕಿಹೊಳಿ ಸಹೋದರೊಂದಿಗೆ ರಹಸ್ಯ ಮಾತುಕತೆಯಲ್ಲಿ ಭಾಗವಹಿಸಿರುವ ಫೋಟೋ ವೈರಲ್ ಆಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ವೈಮನಸ್ಸು ಮುಂದುವರಿದಿದೆ. ಇದರ ನಡುವೆಯೇ ರಾಜ್ಯ ಪ್ರಮುಖ ಸಮುದಾಯವಾದ ವಾಲ್ಮೀಕಿ ಸಮುದಾಯದ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಚರ್ಚೆಯಲ್ಲಿ ರಮೇಶ್ ಜಾರಕಿಹೊಳಿ ಮಾತ್ರವಲ್ಲದೇ ಸತೀಶ್ ಜಾರಕಿಹೊಳಿ ಅವರು ಕೂಡ ಭಾಗವಹಿಸಿದ್ದರು. ಈ ವೇಳೆ ಆಪರೇಷನ್ ಕಮಲ ಬಗ್ಗೆ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ.
Advertisement
Advertisement
ಈ ಹಿಂದೆ ಆಪರೇಷನ್ ಕಮಲ ಮಾಡಲು ವಿಫಲವಾಗಿದ್ದ ಬಿಜೆಪಿ, ಸದ್ಯ ಕಾಂಗ್ರೆಸ್ ಮುಖಂಡರ ಮೂಲಕವೇ ಮಾಡಲು ತೀರ್ಮಾನಿಸಿದೆ ಎನ್ನಲಾಗಿದೆ. ಶಾಸಕ ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯದವರೇ ಆದ ಕಾರಣ ಅವರ ಮುಂದಾಳತ್ವದಲ್ಲಿ ಚರ್ಚೆ ನಡೆಸಲಾಗಿದೆ. ಚರ್ಚೆ ವೇಳೆ ಕಾಂಗ್ರೆಸ್ ಪಕ್ಷದಿಂದ ಶಾಸಕರನ್ನು ಕರೆತರುವ ಜವಾಬ್ದಾರಿಯನ್ನು ಜಾರಕಿಹೊಳಿ ಸಹೋದರರಿಗೆ ವಹಿಸಿದ್ದಾರೆ ಎನ್ನಲಾಗಿದೆ. ಕಳೆದ 2 ದಿನಗಳ ಹಿಂದೆ ಸಭೆ ನಡೆದಿದೆ ಎಂಬ ಮಾಹಿತಿ ಲಭಿಸಿದ್ದು, ಈ ವೇಳೆ ಹಲವು ಬಿಜೆಪಿ ಶಾಸಕರು ಹಾಜರಿರುವುದನ್ನು ಫೋಟೋದಲ್ಲಿ ಕಾಣಬಹುದು.
Advertisement
ಒಂದೊಮ್ಮೆ ಸಚಿವ ಸಂಪುಟ ನಡೆದರೂ ಅಥವಾ ಸಂಪುಟ ವಿಸ್ತರಣೆ ಆಗದೆ ಇದ್ದರು ಏನು ಮಾಡಬೇಕೆಂಬ ಮಾತುಕತೆ ನಡೆದಿದೆ. ಸಂಪುಟ ವಿಸ್ತರಣೆಯಲ್ಲಿ ಅಸಮಾಧಾನ ಹೊಂದಿರುವ ಶಾಸಕರನ್ನು ಬಿಜೆಪಿಗೆ ಕರೆತರುವುದು ಅಥವಾ ಸಂಪುಟ ವಿಸ್ತರಣೆ ಆಗದಿದ್ದರೆ ಕೈ ಬಂಡಾಯ ಶಾಸಕರನ್ನು ಬಿಜೆಪಿಯತ್ತ ಸೆಳೆಯುವುದು ಹಾಗೂ ಅವರನ್ನು ಮತ್ತೆ ಚುನಾವಣೆಯಲ್ಲಿ ಗೆಲ್ಲುವಂತೆ ಮಾಡುವುರ ಬಗ್ಗೆ ಚರ್ಚೆ ಎನ್ನಲಾಗಿದೆ.
Advertisement
ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಕೂಡ ನಾಳೆ ಸಂಪುಟ ವಿಸ್ತರಣೆ ಬಗ್ಗೆ ಖಚಿತ ಮಾಹಿತಿ ನೀಡಿಲ್ಲ. ಹೈಕಮಾಂಡ್‍ಗೆ ಸಂಪುಟ ವಿಸ್ತರಣೆ ಮಾಡಲು ಒಪ್ಪಿಗೆ ಇಲ್ಲ ಎನ್ನಲಾಗಿದ್ದು, ಇಲ್ಲಿ ಜಾರಕಿಹೊಳಿ ಬ್ರದರ್ಸ್‍ಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ ಎನ್ನಲಾಗಿದೆ. ಅಲ್ಲದೇ ಆಪರೇಷನ್ ಯಶಸ್ವಿಯಾದರೆ ಉತ್ತರ ಕರ್ನಾಟದ ಶ್ರೀರಾಮುಲು ಅವರಿಗೆ ಉಪಮುಖ್ಯ ಮಂತ್ರಿ ಸ್ಥಾನ ಹಾಗೂ ಜಾರಕಿಹೊಳಿ ಸಹೋದರಿಗೆ ಸಚಿವ ಸ್ಥಾನ ಹಾಗೂ ಶಾಸಕರಿಗೆ ಮುಂದಿನ ಚುನಾವಣೆಯ ಖರ್ಚು-ವೆಚ್ಚ ಭರಿಸುವ ಭರವಸೆ ಹಾಗೂ ನಿಗಮ, ಮಂಡಳಿ ಅಧ್ಯಕ್ಷಗಿರಿಯ ನೀಡುವ ಆಶ್ವಾಸನೆ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv