ದುಬೈ: ಐಸಿಸಿ ಬಿಡುಗಡೆ ಮಾಡಿರುವ ಏಕದಿನ ಕ್ರಿಕೆಟ್‍ನ ನೂತನ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ನಂಬರ್ 1 ಸ್ಥಾನಕ್ಕೇರಿದ್ದಾರೆ.
ಐಸಿಸಿ ಇಂದು ಬಿಡುಗಡೆ ಮಾಡಿದ ನೂತನ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಬುಮ್ರಾ 4 ಸ್ಥಾನ ಮೇಲೇರಿ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಈ ಹಿಂದೆ ಬುಮ್ರಾ 5ನೇ ಸ್ಥಾನದಲ್ಲಿದ್ದರು. ನಿನ್ನೆ ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ 7.2 ಓವರ್ ಎಸೆದು 19 ರನ್ ನೀಡಿ 6 ವಿಕೆಟ್ ಕಿತ್ತು ಮಿಂಚಿದ್ದರು. ಈ ಮೂಲಕ ರ್‍ಯಾಂಕಿಂಗ್‌ನಲ್ಲಿ ಪ್ರಗತಿ ಕಂಡು ನಂಬರ್ 1 ಸ್ಥಾನಕ್ಕೆ ಜಿಗಿದಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯವಾಡಲ್ಲ ಕೊಹ್ಲಿ?
No bowler above him ????
Jasprit Bumrah stands as the No.1 ODI bowler in the latest @MRFWorldwide rankings!
— ICC (@ICC) July 13, 2022
ಬುಮ್ರಾ ಒಟ್ಟು 718 ಅಂಕಗಳೊಂದಿಗೆ ನಂಬರ್ 1 ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‍ನ ಟ್ರೆಂಟ್ ಬೌಲ್ಟ್ 712 ಅಂಕಗಳೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿ ಪಾಕಿಸ್ತಾನದ ಶಾಹೀನ್ ಅಫ್ರಿದಿ ಕಾಣಿಸಿಕೊಂಡಿದ್ದಾರೆ. ರ್‍ಯಾಂಕಿಂಗ್‌ನಲ್ಲಿ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶದ ತಲಾ ಒಬ್ಬೊಬ್ಬ ಆಟಗಾರ ಸ್ಥಾನ ಪಡೆದರೆ, ನ್ಯೂಜಿಲೆಂಡ್‍ನ ಇಬ್ಬರು ಮತ್ತು ಅಫ್ಘಾನಿಸ್ತಾನದ ಮೂರು ಮಂದಿ ಆಟಗಾರರು ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಬುಮ್ರಾ ಬೌಲಿಂಗ್ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ