– ಜಸ್ವಂತ್ ಪುತ್ರ, ಮೊಮ್ಮಗನಿಗೆ ಗಾಯ
ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ವಿದೇಶಾಂಗ ಸಚಿವ ಜಸ್ವಂತ್ ಸಿಂಗ್ (Former Foreign Minister Jaswant Singh) ಅವರ ಸೊಸೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ರಾಜಸ್ಥಾನದ ಅಲ್ವಾರ್‌ನ (Alwar Rajasthan) ನೌಗಾಂವ್ ಬಳಿಯ ಖುಷ್ಪುರಿ ಗ್ರಾಮದ ಬಳಿ ದೆಹಲಿ-ಜೈಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಸಂಜೆ ಈ ರಸ್ತೆ ಅಪಘಾತ ಸಂಭವಿಸಿದೆ. ಮನ್ವೇಂದ್ರ ಅವರು ತಮ್ಮ ಕುಟುಂಬದೊಂದಿಗೆ ದೆಹಲಿಯಿಂದ ಜೈಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮೋರಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಪತ್ನಿ ಚಿತ್ರಾ ಸಿಂಗ್ (Chitra Singh) ಸ್ಥಳದಲ್ಲೇ ಸಾವನ್ನಪ್ಪಿದರೆ, ಕೈ ನಾಯಕ ಮನ್ವೇಂದ್ರ ಸಿಂಗ್ (Congress leader Manvendra Singh) ಹಾಗೂ ಅವರ ಮಗ ಹಮೀರ್ ಸಿಂಗ್ ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಅಲ್ವಾರ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕಾಲೇಜಿಗೆ ಹೋಗುವಂತೆ ಬೈದಿದ್ದಕ್ಕೆ ಬಾವಿಗೆ ಜಿಗಿದ ತಂಗಿ- ರಕ್ಷಿಸಲು ಹೋದ ಅಣ್ಣನೂ ಸಾವು
ತಂದೆ-ಮಗ ಇಬ್ಬರಿಗೂ ಪಕ್ಕೆಲುಬುಗಳಿಗೆ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸದ್ಯ ಗಾಯಾಳುಗಳ ಸ್ಥಿತಿ ಅಪಾಯದಿಂದ ಪಾರಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಅಲ್ವಾರ್‌ನ ಸೋಲಂಕಿ ಆಸ್ಪತ್ರೆಯ ವೈದ್ಯ ವೈದ್ಯ ದೇವವ್ರತ್ ಶರ್ಮಾ ಮಾತನಾಡಿ, ಮಾಜಿ ಸಂಸದ ಮನ್ವೇಂದ್ರ ಸಿಂಗ್ ಅವರ ಪಕ್ಕೆಲುಬಿಗೆ ಗಾಯವಾಗಿದೆ. ಅದರಲ್ಲಿ ಮೂಳೆ ಮುರಿತದಿಂದಾಗಿ ಅವರ ಶ್ವಾಸಕೋಶಕ್ಕೂ ಹಾನಿಯಾಗಿದೆ. ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.