ಉಡುಪಿ: ಕಾಂಗ್ರೆಸ್ ಅನ್ನೇ ಆರಾಧಿಸಿದ್ದ ಜವಾಹರಲಾಲ್ ನೆಹರೂ ಅವರು ಆರ್‌ಎಸ್‌ಎಸ್ ಸಂಘಟನೆಯನ್ನು ಹೊಗಳಿದ್ದರು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರ್‌ಎಸ್‌ಎಸ್ ರಾಷ್ಟ್ರಪ್ರೇಮಿ ಸಂಘಟನೆ ಎಂದು ನೆಹರೂ ಅವರು ಬಣ್ಣಿಸಿದ್ದರು. ಅಲ್ಲದೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಆರ್‌ಎಸ್‌ಎಸ್‌ಗೆ ಅವಕಾಶ ಕೊಟ್ಟಿದ್ದರು. ಆರ್‌ಎಸ್‌ಎಸ್ ಅನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೆಹರೂಗಿಂತ ಮೇಲಿನವರಾ ಎಂದು ಸಚಿವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹೇಗೆ ಬದುಕ್ಬೇಕು, ಹೇಗೆ ಸಾಮಾಜಿಕ ಕಾರ್ಯಗಳನ್ನು ಮಾಡ್ಬೇಕು ಅನ್ನೋದಕ್ಕೆ ಪುನೀತ್ ಮಾದರಿ: ರಾಜಮೌಳಿ
ಸಂವಿಧಾನ ದಿನಾಚರಣೆ ಬಹಿಷ್ಕರಿಸಿರುವ ಕಾಂಗ್ರೆಸ್ ನಡೆ ಬಗ್ಗೆ ಟೀಕಿಸಿದ ಸಚಿವರು, ಕಾಂಗ್ರೆಸ್ಸಿನವರು ನಮ್ಮನ್ನು ಹೊಗಳಬೇಕು ಎಂದು ಆಸೆ ಪಡೋದಕ್ಕಾಗುತ್ತಾ? ಬಿಜೆಪಿಯನ್ನು ಬೈಯ್ಯೋದೆ ಕಾಂಗ್ರೆಸ್ ಅಜೆಂಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ನಮಗೆ ಭಾವುಕತೆಯಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕುಟುಂಬದಿಂದಲೇ ಪಕ್ಷ, ಕುಟುಂಬಕ್ಕಾಗಿಯೇ ಪಕ್ಷ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಪಟ್ಟಿ ಸಿದ್ಧಪಡಿಸಿದೆ. ಅಸ್ಪೃಶ್ಯತೆ ತೊಡೆದು ಹಾಕುವ ಸವಾಲು ನಮ್ಮ ಮುಂದೆ ಇದೆ. ಪ್ರತಿಯೊಬ್ಬರನ್ನೂ ಅಸ್ಪೃಶ್ಯತೆ ನಿವಾರಣೆಗೆ ಸಿದ್ಧಪಡಿಸುತ್ತೇವೆ. ಚುನಾವಣೆಯ ಬಳಿಕ ಈ ಕುರಿತು ಸರ್ಕಾರಿ ಕಾರ್ಯಕ್ರಮ ರೂಪಿಸುತ್ತೇವೆ. ಪೇಜಾವರ ಶ್ರೀಗಳನ್ನು ಕೂಡಿಕೊಂಡು ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.