ನೆಹರು ಆಧುನಿಕ ಭಾರತದ ಶಿಲ್ಪಿ: ಸಿದ್ದರಾಮಯ್ಯ

Public TV
1 Min Read
Jawaharlal Nehru architect of modern India Karnataka CM Siddaramaiah

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಣ್ಣಿಸಿದರು.

ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿಗಳಾದ ದಿವಂಗತ ಪಂಡಿತ್ ಜವಾಹರ್‌ಲಾಲ್ ನೆಹರು ಅವರ (Jawaharlal Nehru) 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

 

ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ (Children’s day) ಆಚರಿಸಲಾಗುತ್ತದೆ. ನೆಹರು ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿ ಇದ್ದಕಾರಣ ಅವರನ್ನು ಚಾಚಾ ನೆಹರು ಎಂದು ಕರೆಯಲಾಗುತ್ತಿತ್ತು ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಶಾಸಕರಿಗೆ ಬಿಜೆಪಿಯವರು ಆಫರ್ ಮಾಡ್ತಿರೋದು ನಿಜ: ಡಿಕೆ ಶಿವಕುಮಾರ್

ಸುಮಾರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದಲ್ಲಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು. ಸಮಾಜವಾದಿಯಾಗಿದ್ದ ನೆಹರು ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ. ನೆಹರು, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್ ಕಾಂಗ್ರೆಸ್ ಕಟ್ಟಿದರು. 17 ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ, ಉದ್ಯೋಗ ಸೃಷ್ಟಿ ಮಾಡಿದರು. ವಿಜ್ಞಾನ ಮತ್ತು ವೈಚಾರಿಕತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದ ನೆಹರು ಅವರು ಸುದೀರ್ಘ ಕಾಲ ದೇಶದ ಪ್ರಧಾನಿಯಾಗಿದ್ದರು. ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರು ಅವರ ಕೊಡುಗೆ ಅಪಾರ. ಆಹಾರ ಸ್ವಾವಲಂಬನೆಗೆ ನೆಹರು, ಇಂದಿರಾ ಗಾಂಧಿ, ಜಗಜೀವನ್ ರಾಂ ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಲ್ಲರೂ ಕಾರಣ. ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅವರು ಕಾರಣ ಎಂದು ಹಾಡಿ ಹೊಗಳಿದರು.

 

Share This Article