ತಮಿಳಿನ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanthara) ನಟಿ, ನಿರ್ಮಾಪಕಿಯಾಗಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಪ್ರಭಾಸ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲು ‘ಜವಾನ್’ (Jawan) ಬೆಡಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನಾಯಕಿಯಾಗಿ ಅಲ್ಲ, ಬದಲಾಗಿ ಐಟಂ ಹಾಡಿಗೆ ಹೆಜ್ಜೆ ಹಾಕಲು ರೆಡಿಯಾಗಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ.
ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ (The Raaja Saab) ಸಿನಿಮಾದಲ್ಲಿ ನಯನತಾರಾ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಲು ಚಿತ್ರತಂಡ ನಟಿಯನ್ನು ಸಂಪರ್ಕಿಸಿದೆ ಎನ್ನಲಾಗಿದೆ. ನಟಿ ಕೂಡ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಚಾರ ನಿಜನಾ? ಎಂಬುದನ್ನು ಚಿತ್ರತಂಡದ ಕಡೆಯಿಂದ ಸ್ಪಷ್ಟನೆ ಸಿಗುವವರೆಗೂ ಕಾಯಬೇಕಿದೆ.
ಇನ್ನೂ ಈ ಚಿತ್ರದಲ್ಲಿ ಪ್ರಭಾಸ್ ಜೊತೆ ನಿಧಿ ಅಗರ್ವಾಲ್, ಮಾಳವಿಕಾ ಮೋಹನನ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇದೇ ಮುಂದಿನ ವರ್ಷ ಏ.10ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ:ಅಲ್ಲು ಅರ್ಜುನ್‌ಗೆ ಮತ್ತೆ ಸಂಕಷ್ಟ – ಜಾಮೀನು ಪ್ರಶ್ನಿಸಿ ತೆಲಂಗಾಣ ಪೊಲೀಸರು ಸುಪ್ರೀಂ ಮೆಟ್ಟಿಲೇರುವ ಸಾಧ್ಯತೆ