ಮುಂಬೈ: ಈ ಬಾರಿ ಲೋಕಸಭಾ ಚುನಾವಣೆ ಹೊರತಾಗಿಯೂ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಟೂರ್ನಿಯನ್ನು ವಿದೇಶಕ್ಕೆ ಸ್ಥಳಾಂತರಿಸುವುದಿಲ್ಲ. ಸಂಪೂರ್ಣ ಲೀಗ್ ಭಾರತದಲ್ಲೇ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಸ್ಪಷ್ಟನೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೊದಲ 21 ಪಂದ್ಯಗಳು ಭಾರತದಲ್ಲಿ ನಡೆಯಲಿದ್ದು, ಉಳಿದ ಪಂದ್ಯಗಳು ದುಬೈಗೆ ಸ್ಥಳಾಂತರಿಸಲಾಗುತ್ತದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿತ್ತು. ಈ ಬೆನ್ನಲ್ಲೇ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: RCB – CSK ಫ್ಯಾನ್ಸ್‌ಗೆ ಗುಡ್‌ನ್ಯೂಸ್ – ಸೋಮವಾರದಿಂದಲೇ ಟಿಕೆಟ್ ಮಾರಾಟ ಶುರು, ದರ ಎಷ್ಟು?
Advertisement
Advertisement
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಈ ಹಿಂದೆ ಮಾಡಿದಂತೆ ಟೂರ್ನಿಯನ್ನು ಸ್ಥಳಾಂತರಿಸುವುದಿಲ್ಲ. ಈ ಬಾರಿ ಸಂಪೂರ್ಣ ಐಪಿಎಲ್ ಭಾರತದಲ್ಲೇ ನಡೆಯಲಿದೆ. ಯಾವುದೇ ಕಾರಣಕ್ಕೂ ಸ್ಥಳಾಂತರಿಸುವುದಿಲ್ಲ. ಚುನಾವಣೆಗೂ ಸಮಸ್ಯೆಯಾಗದಂತೆ ಉಳಿದ ವೇಳಾಪಟ್ಟಿ ಸಿದ್ಧಪಡಿಸುವ ಕಾರ್ಯದಲ್ಲಿ ಬಿಸಿಸಿಐ ಮಂಡಳಿ ತೊಡಗಿದೆ. ಶೀಘ್ರವೇ ಅದನ್ನು ಸಾರ್ವಜನಿಕಗೊಳಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: WPL 2024: ಅಂಪೈರ್ ಎಡವಟ್ಟು – ಫಿಕ್ಸಿಂಗ್ ಹಣೆಪಟ್ಟಿ ಕಟ್ಟಿಕೊಂಡ ಮುಂಬೈ ಇಂಡಿಯನ್ಸ್
Advertisement
Advertisement
ಐಪಿಎಲ್ ಆರಂಭ ಯಾವಾಗ?
ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ 22 ರಿಂದ ಆರಂಭವಾಗಲಿದೆ. ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆ ಮೊದಲ 15 ದಿನಗಳು ಕಾಲ ನಡೆಯುವ 21 ಪಂದ್ಯಗಳ ವೇಳಾಪಟ್ಟಿ ಸದ್ಯಕ್ಕೆ ಪ್ರಕಟಿಸಲಾಗಿದೆ. ಮಾ. 22ರಿಂದ ಏಪ್ರಿಲ್ 7ರ ತನಕ 21 ಪಂದ್ಯಗಳು ನಡೆಯಲಿದ್ದು, ಈ ಪೈಕಿ 4 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯವು ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಉಳಿದ ಪಂದ್ಯಗಳು ಸಂಜೆ 7.30ಕ್ಕೆ ಪ್ರಾರಂಭವಾಗಲಿವೆ. ಡಬಲ್ ಹೆಡ್ಡರ್ ದಿನದಂದು ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.
ಯಾರ ನಡುವೆ, ಯಾವ ದಿನ, ಎಲ್ಲಿ ಪಂದ್ಯ?
1. ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಮಾರ್ಚ್ 22 ಚೆನ್ನೈ,
2. ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 23, ಮೊಹಾಲಿ,
3. ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ರೈಸರ್ಸ್ ಹೈದರಾಬಾದ್, ಮಾರ್ಚ್ 23, ಕೋಲ್ಕತ್ತಾ
4. ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಮಾರ್ಚ್ 24, ಜೈಪುರ
5. ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್, ಮಾರ್ಚ್ 24, ಅಹಮದಾಬಾದ್
6. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಮಾರ್ಚ್ 25, ಬೆಂಗಳೂರು
7. ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ಮಾರ್ಚ್ 26, ಚೆನ್ನೈ
8. ಸನ್ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್, ಮಾರ್ಚ್ 27, ಹೈದರಾಬಾದ್
9. ಆರ್‌ಆರ್ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 28 ಜೈಪುರ
10. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್, ಮಾರ್ಚ್ 29 ಬೆಂಗಳೂರು
11. ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್, ಮಾರ್ಚ್ 30, ಲಕ್ನೋ
12. ಗುಜರಾತ್ ಟೈಟಾನ್ಸ್ vs ಸನ್ರೈಸರ್ಸ್ ಹೈದರಾಬಾದ್, ಮಾರ್ಚ್ 31, ಅಹಮದಾಬಾದ್
13. ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಮಾರ್ಚ್ 31, ವಿಶಾಖಪಟ್ಟಣಂ
14. ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ಏಪ್ರಿಲ್ 1, ಮುಂಬೈ
15. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಏಪ್ರಿಲ್ 2, ಬೆಂಗಳೂರು
16. ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಏಪ್ರಿಲ್ 3, ವಿಶಾಖಪಟ್ಟಣಂ
17. ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್, ಏಪ್ರಿಲ್ 4, ಅಹಮದಾಬಾದ್
18. ಸನ್ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್, ಏಪ್ರಿಲ್ 5, ಹೈದರಾಬಾದ್
19. ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಏಪ್ರಿಲ್ 6, ಜೈಪುರ
20. ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 7, ಮುಂಬೈ
21. ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್, ಏಪ್ರಿಲ್ 7, ಲಕ್ನೋ