ಬೆಳಗಾವಿ: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರಕ್ಕೆ ಕೊಟ್ಟಿದ್ದ ಗಡುವು ಮುಗಿದಿದೆ ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
Advertisement
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಕ್ಯಾಬಿನೆಟ್ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು. ಆಯೋಗದ ವರದಿ ಪಡೆದು ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ನೀಡುವುದೊಂದೇ ಬಾಕಿ. ಈ ವಿಚಾರವಾಗಿ ನಿನ್ನೆ ಬೆಂಗಳೂರಿನಲ್ಲಿ ನಡೆದ ಅಧಿವೇಶನದಲ್ಲಿ ಸಮಾಜದ ಮುಖಂಡ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಹಲವರು ಧ್ವನಿ ಎತ್ತಿದ್ದು, 2ಎ ಮೀಸಲಾತಿ ಹೋರಾಟಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ವಿಶ್ವಾಸವಿದೆ ಎಂದರು. ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶ ಪತ್ರ
Advertisement
Advertisement
ನಿನ್ನೆ ಈ ವಿಚಾರವಾಗಿ ಇಂದು ಬೆಳಗ್ಗೆ ಸಿಎಂ ಉತ್ತರ ಕೋಡುತ್ತಾರೆ ಎಂದು ಹೇಳಿದ್ದರು. ಇಂದು ಸಿಎಂ ಉತ್ತರ ಕೊಟ್ಟರು. ಏನು ತೀರ್ಮಾನ ತೆಗೆದುಕೊಂಡಿದ್ದಾರೆ ನಮಗೆ ಗೊತ್ತಿಲ್ಲ. ಶಾಸಕ ಬಸನಗೌಡ ಪಾಟೀಲ್ ಬೆಳಗಾವಿಗೆ ಬರುತ್ತಾರೆ. ಯತ್ನಾಳ್‍ಗೆ ಸಿಎಂ ಯಾವ ಭರವಸೆ ನೀಡಿದ್ದಾರೆ ಗೊತ್ತಿಲ್ಲ. ಇಂದು ಸಮಾವೇಶದಲ್ಲಿ ಯತ್ನಾಳ್ ಅವರು ಭಾಗಿಯಾಗುವ ಸಾಧ್ಯತೆ ಇದೆ. ಸಮಾವೇಶದಲ್ಲಿ ಈ ವಿಚಾರವಾಗಿ ಚರ್ಚೆ ಮಾಡುತ್ತೇವೆ. ನಂತರ ಹೋರಾಟದ ಮುಂದಿನ ರೂಪರೇಷೆ ಬಗ್ಗೆ ಚರ್ಚೆ ಮಾಡಲಾಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ
Advertisement
ಸರ್ಕಾರ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳುವ ಭರವಸೆ ನಮಗಿದೆ. ಮೀಸಲಾತಿ ವಿಚಾರವಾಗಿ ಸರ್ಕಾರ ಬೇಗ ಸಿಹಿ ಸುದ್ದಿ ಕೊಡಬೇಕು. ಸಿಹಿ ಸುದ್ದಿ ಕೊಟ್ಟರೆ ಸಿಎಂಗೆ ಕಲ್ಲುಸಕ್ಕರೆ ತುಲಾಭಾರ ಮಾಡಲಾಗುತ್ತೆ, ಇಲ್ಲಾವಾದರೆ ಮತ್ತೆ ಹೋರಾಟ ಮುಂದುವರಿಸಲಾಗುತ್ತೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.