ಬೆಂಗಳೂರು: ಜಯದೇವ ಆಸ್ಪತ್ರೆ ನಿರ್ದೇಶಕರನ್ನಾಗಿ ಡಾ. ಮಂಜುನಾಥ್‍ರನ್ನು (Dr Manjunath) ಮುಂದುವರಿಸುವ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದೆ. ಜನವರಿ 31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ (Jayadeva Hospital Director) ಡಾ. ಮಂಜುನಾಥ್ ಅವಧಿ ಮುಕ್ತಾಯವಾಗಲಿದೆ.
ಕಳೆದ ಬಾರಿ ಅವಧಿ ಮುಕ್ತಾಯ ಬಳಿಕ ಜನರ ಒತ್ತಾಯ ಕೇಳಿ ಬಂದ ಹಿನ್ನೆಲೆ 6 ತಿಂಗಳ ಕಾಲ ಹುದ್ದೆಯಲ್ಲಿ ಸರ್ಕಾರ ಮುಂದುವರಿಸಿತ್ತು. ಎನ್‍ಎಂಸಿ ಆಕ್ಟ್ ಪ್ರಕಾರ 70 ವರ್ಷದವರೆಗೂ ಸೇವೆ ಸಲ್ಲಿಸಬಹುದಾಗಿದೆ. ಡಾ. ಮಂಜುನಾಥ್ ಅವರಿಗೆ 67 ವರ್ಷವಾಗಿದ್ದು, ಇನ್ನು 3 ವರ್ಷಗಳ ಕಾಲ ಸೇವೆ ಸಲ್ಲಿಸಬಹುದಾಗಿದೆ. ಆದರೆ ಸರ್ಕಾರ ಮುಂದುವರಿಸುವ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಜನವರಿ 31ಕ್ಕೆ ಡಾ. ಮಂಜುನಾಥ್ ನಿವೃತ್ತಿ ಘೋಷಣೆ ಮಾಡಲಿದ್ದಾರೆ.
ಜಯದೇವ ಆಸ್ಪತ್ರೆ ನಿರ್ದೇಶಕರ ಹುದ್ದೆಗೆ ಪೈಪೋಟಿ ಆರಂಭವಾಗಿದ್ದು, 15ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಈ ನಡುವೆ ಮೈಸೂರು ಮೂಲದ ಸಿಎಂ ಆಪ್ತರಿಗೆ ನಿರ್ದೇಶಕರ ಹುದ್ದೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಅನ್ನೋ ಚರ್ಚೆ ಜೋರಾಗಿದೆ.
ಚುನಾವಣೆಗೆ ಸ್ಪರ್ಧಿಸ್ತಾರೆ ಎಂಬ ಚರ್ಚೆ ಜೋರಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಾ.ಮಂಜುನಾಥ್ ಅವರು, ಆ ರೀತಿ ಏನಿಲ್ಲ ಚುನಾವಣೆಗೆ ನಿಲ್ಲೊಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 3 ದಿನ ಲಾಡ್ಜ್‌ನಲ್ಲಿಟ್ಟು ಚಿತ್ರಹಿಂಸೆ ಕೊಟ್ಟ ಆರೋಪ- ಕಾಟನ್‍ಪೇಟೆ ಪೊಲೀಸರ ವಿರುದ್ಧ ವ್ಯಕ್ತಿ ದೂರು