ಚೆನ್ನೈ: ತಮಿಳುನಾಡಿನ (TamilNadu) ಮಾಜಿ ಸಿಎಂ ದಿ. ಜಯಲಲಿತಾ ಅವರ 11,344 ರೇಷ್ಮೆ ಸೀರೆ, 750 ಜೋಡಿ ಚಪ್ಪಲಿ ಸೇರಿದಂತೆ ಆಸ್ತಿ ಪತ್ರ ಹಸ್ತಾಂತರ ಪ್ರಕ್ರಿಯೆ ಸಿಸಿಎಚ್ ಕೋರ್ಟ್ ಹಾಲ್ (CCH Court) 34ರಲ್ಲಿ ನಡೆಯಿತು.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಲವು ವಸ್ತುಗಳನ್ನು ವಿಶೇಷ ನ್ಯಾಯಾಲಯವು ವಶಪಡಿಸಿಕೊಂಡಿತ್ತು. ವಶಪಡಿಸಿಕೊಂಡ ವಸ್ತುಗಳನ್ನು ಹಾಗೂ ಬಟ್ಟೆಗಳನ್ನು ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ನೀಡುವಂತೆ ಕೋರ್ಟ್ ಆದೇಶ ಹೊರಡಿಸಿತ್ತು. ಅದರಂತೆ ಜಯಲಲಿತಾ (Jayalalithaa) ಅವರಿಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7,040 ಗ್ರಾಂ (7.04 ಕೆಜಿ) ತೂಕದ 468 ಬಗೆಯ ಚಿನ್ನಾಭರಣ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, ವಾಚ್‌ಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ನಡೀತು. ಇದನ್ನೂ ಓದಿ: ಜಿಯೋ ಹಾಟ್‌ಸ್ಟಾರ್ ವಿಲೀನ | ಇನ್ಮುಂದೆ ಐಪಿಎಲ್ ಉಚಿತ ವೀಕ್ಷಣೆ ಇಲ್ಲ- ಎರಡನ್ನೂ ಸಬ್‌ಸ್ಕ್ರೈಬ್ ಮಾಡಿದವರ ಕಥೆ ಏನು?
Advertisement
Advertisement
ಸಂಬಂಧಿಕರು ಎಂದು ಹೇಳಿಕೊಂಡು ದೀಪ ಹಾಗೂ ದೀಪಕ್ ಇಬ್ಬರು ಜಯಲಲಿತಾ ಒಡವೆಯನ್ನ ನಮಗೆ ಕೊಡಿ ಎಂದು ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿಯನ್ನ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್ ಅವರ ಅರ್ಜಿಯನ್ನು ವಜಾ ಮಾಡಿತ್ತು. ಇಂದು ನ್ಯಾಯಾಧೀಶರ ಸಮ್ಮುಖದಲ್ಲಿ ತಮಿಳುನಾಡು ಸರ್ಕಾರಕ್ಕೆ ಎಲ್ಲಾ ವಸ್ತುಗಳನ್ನು ವರ್ಗಾವಣೆ ಮಾಡಲಾಯ್ತು. ಇದನ್ನೂ ಓದಿ: ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕದ ಸಾಮರ್ಥ್ಯಕ್ಕೆ ಸಾಕ್ಷಿ: ಡಿಕೆಶಿ
Advertisement
Advertisement
ವಕೀಲರು ಹಾಗೂ ತಮಿಳುನಾಡಿನ ಕೆಲ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಪ್ರತಿಯೊಂದು ಮಾಹಿತಿಯನ್ನು ನೀಡಿ ಚಿನ್ನದ ಒಡವೆಗಳನ್ನು ತೂಕ ಹಾಕಿ ಬಿಗಿ ಭದ್ರತೆಯಲ್ಲಿ ಕೊಂಡೊಯ್ಯಲಾಯ್ತು. 7,040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಾಭರಣಗಳು, 700 ಕೆ.ಜಿ ತೂಕದ ಬೆಳ್ಳಿ ಆಭರಣಗಳು, 11,344 ರೇಷ್ಮೆ ಸೀರೆಗಳು, 740 ದುಬಾರಿ ಚಪ್ಪಲಿಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್ ಹಾಗೂ 1,040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್‌ಗಳು ತಮಿಳುನಾಡು ಸರ್ಕಾರಕ್ಕೆ ಸೇರಲಿವೆ. ಇದನ್ನೂ ಓದಿ: ಬೆಂಗಳೂರು | 5 ಕೋಟಿ ವೆಚ್ಚದಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನ್‌ಗೆ ಬಿಬಿಎಂಪಿ ಪ್ಲ್ಯಾನ್!