ಕೊಪ್ಪಳ: ಯಡಿಯೂರಪ್ಪರಿಂದಲೇ ಮುರುಗೇಶ್ ನಿರಾಣಿಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತ್ತು ಎಂದು ಪಂಚಮಸಾಲಿ ಸಮಾಜದ ಕೂಡಲಸಂಗಮ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ.
Advertisement
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂತ್ರಿ ಆಗಿಲ್ಲ ಅಂತ ಯಾರೂ ಬೇಜಾರಾಗಬೇಡಿ ಎಂದು ಈಗಾಗಲೇ ಬಸನಗೌಡ ಪಾಟೀಲ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. ಮಂತ್ರಿಗಿಂತ ಮೀಸಲಾತಿ ಮುಖ್ಯ ಎಂದು ತಿಳಿಸಿದ್ದಾರೆ. ಅವರು ಬಾಹುಬಲಿ ಇದ್ದಂಗೆ ಹೊರಗೂ ಗುಡುಗುತ್ತಾರೆ, ಒಳಗೂ ಗುಡುಗುತ್ತಾರೆ ಎಂದರು. ನಮ್ಮವರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಅಪೇಕ್ಷೆ ಇತ್ತು. ಮುರುಗೇಶ್ ನಿರಾಣಿಗೆ ಮುಖ್ಯಮಂತ್ರಿ ಸ್ಥಾನವನ್ನು ಯಾರು ತಪ್ಪಿಸಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಯಡಿಯೂರಪ್ಪ ಅವರಿಂದಲೇ ನಿರಾಣಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದೆ ಎಂದು ಸ್ವಾಮೀಜಿ ಆರೋಪಿಸಿದರು. ಇದನ್ನೂ ಓದಿ: ಗುಜರಾತ್‍ನಂತೆ ಕರ್ನಾಟಕದಲ್ಲಿ ಮಾದರಿ ಸಂಪುಟ ರಚನೆ ಆಗಲಿ: ವಿಜಯೇಂದ್ರ
Advertisement
Advertisement
ಅ.1ರಿಂದ ಸತ್ಯಾಗ್ರಹ ಮಾಡಲು ಪಂಚಮಸಾಲಿ ಸಮುದಾಯ ತೀರ್ಮಾನಿಸಿದೆ. ಅಷ್ಟರಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ 2ಎ ಮೀಸಲಾತಿ ಘೋಷಿಸಬೇಕು. ಇಲ್ಲವಾದರೆ ಬೆಂಗಳೂರಿನಲ್ಲೇ ಹೋರಾಟ ಆರಂಭಿಸಲಾಗುವುದು ಎಂದು ತಿಳಿಸಿದರು. ಈ ಹಿಂದೆ ಸರ್ಕಾರ 6 ತಿಂಗಳ ಸಮಯವನ್ನು ಕೇಳಿತ್ತು. ಅವರು ಕೇಳಿದ್ದ ಸಮಯ ಮುಗಿದಿದೆ. ನಮ್ಮ ಬೇಡಿಕೆಯನ್ನು ನೆನಪಿಸುವ ಸಲುವಾಗಿ ಮತ್ತೆ ಅಭಿಯಾನ ಶುರು ಮಾಡಿ ಇಡೀ ರಾಜ್ಯದಲ್ಲಿ ಪಂಚಮಸಾಲಿ ಸಮುದಾಯ ಒಂದಾಗಿದೆ ಎಂಬುದನ್ನು ತೋರಿಸುತ್ತೇವೆ ಎಂದರು. ಇದನ್ನೂ ಓದಿ:ಮದುವೆ ಆಗಲು ಒಪ್ಪದ ಪ್ರಿಯಕರನಿಗೆ ಪ್ರೇಯಸಿಯಿಂದ ಬಿತ್ತು ಗೂಸಾ
Advertisement
ದೇವಸ್ಥಾನಗಳ ತೆರವು ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ನಾನು ಆ ಬಗ್ಗೆ ಮಾತನಾಡುವುದಿಲ್ಲ. ಸುಪ್ರೀಂ ಕೋರ್ಟ್ ಆದೇಶವಿದೆ. ಅದು ಅಲ್ಲಿನ ಜಿಲ್ಲಾಡಳಿತಕ್ಕೆ ಸಂಬಂಧಿಸಿದ್ದು. ಇದಕ್ಕೆಲ್ಲ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ದೇವಸ್ಥಾನ, ಮಸೀದಿ ಬಗ್ಗೆ ನಾನು ಮಾತನಾಡುವುದಿಲ್ಲ. ವಿಷಯ ಗೊಂದಲವಾಗುತ್ತದೆ. ಎಲ್ಲರಿಗೂ ಒಂದೇ ರೀತಿಯ ಕಾನೂನು ಇರಲಿ ಎಂದು ಸ್ವಾಮೀಜಿ ಹೇಳಿದರು.