ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್(60) ವಿಧಿವಶರಾಗಿದ್ದಾರೆ.
ಲಘು ಹೃದಯಾಘಾತವಾಗಿ ಗುರುವಾರ ವಿಜಯ್ ಕುಮಾರ್ ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಕರೆತರುವಾಗಲೇ ಅವರ ಹೃದಯ ಬಡಿತ, ಬಿಪಿ ಕುಸಿತ ಕಂಡಿತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 1 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ ಅಂತ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಹೇಳಿದ್ದಾರೆ.
Advertisement
Advertisement
ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಅವರು ಜಯನಗರ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದರು. ಚುನಾವಣೆಗೆ ಕೆಲ ದಿನಗಳು ಬಾಕಿ ಇರುವ ವೇಳೆಯಲ್ಲಿ ವಿಜಯ್ ಕುಮಾರ್ ಅವರು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದರು. ನಿನ್ನೆ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ಏಕಾಏಕಿ ಕುಸಿದು ಬಿದ್ದಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತರು ಅವರನ್ನು ತಕ್ಷಣ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದರು.
Advertisement
Advertisement
ವಿಜಯ್ ಕುಮಾರ್ ಪಾರ್ಥೀವ ಶರೀರವನ್ನು ಜಯನಗರ ನಾಲ್ಕನೇ ಬ್ಲಾಕ್‍ನಲ್ಲಿರುವ ಅವರ ಮನೆಗೆ ತರಲಾಯ್ತು. ಇದೀಗ ಅವರ ಮನೆ ಮುಂದೆ ಅಪಾರ ಪ್ರಮಾಣದ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಸೇರಿದ್ದಾರೆ. ಕಂಬನಿ ಸುರಿಸ್ತಿದ್ದಾರೆ. ಇನ್ನು ರಾಜಕಾರಣಿಗಳು ಸಹ ಆಗಮಿಸಲಿದ್ದಾರೆ.
ನೇತ್ರದಾನ: ಕೊನೆ ಆಸೆಯಂತೆ ವಿಜಯ್ ಕುಮಾರ್ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ಮನೆ ಬಳಿಯೇ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಮಧ್ಯಾಹ್ನದ ಬಳಿಕ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಇನ್ನು ಬಿಜೆಪಿ ಅಭ್ಯರ್ಥಿ ಶಾಸಕ ವಿಜಯ್ ಕುಮಾರ್ ಇಹಲೋಕ ತ್ಯಜಿಸಿದ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮುಂದೂಡಿಕೆಯಾಗೋ ಸಾಧ್ಯತೆಗಳು ಹೆಚ್ಚಿವೆ. ಇಂದು ಚುನಾವಣಾ ಆಯೋಗದಿಂದ ಘೋಷಣೆ ಘೋಷಣೆ ಹೊರಡಿಸುವ ಸಂಭವ ಇದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.