Wednesday, 22nd January 2020

Recent News

ಜಯಣ್ಣ ಫಿಲಂಸ್ ನೂತನ ಚಿತ್ರ ಆರಂಭ – ಗುರುನಂದನ್ ಹೀರೋ

ಬೆಂಗಳೂರು: ಜಯಣ್ಣ ಫಿಲಂಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಆಗಸ್ಟ್ 19ರ ಸೋಮವಾರ ಮೋದಿ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಲವ್ ಹಾಗೂ ಕಾಮಿಡಿ ಕಥೆ ಆಧರಿಸಿರುವ ಈ ಚಿತ್ರಕ್ಕೆ ಸುಮಾರು 50ದಿನಗಳ ಚಿತ್ರೀಕರಣ ನಡೆಯಲಿದ್ದು, ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯುತ್ತಿದೆ.

ಈ ಹಿಂದೆ ರಾಮ್ ಲೀಲಾ, ಸಿಂಗ ಚಿತ್ರಗಳನ್ನು ನಿರ್ದೇಶಿಸಿದ್ದ ವಿಜಯ್ ಕಿರಣ್ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಫಸ್ಟ್ ರ‍್ಯಾಂಕ್ ರಾಜು ಖ್ಯಾತಿಯ ಗುರುನಂದನ್ ಅಭಿನಯಿಸುತ್ತಿದ್ದಾರೆ. ಸಾಧುಕೋಕಿಲ, ಶಿವರಾಜ್ ಕೆ.ಆರ್.ಪೇಟೆ, ಕಡ್ಡಿಪುಡಿ ಚಂದ್ರು, ಕುರಿ ಪ್ರತಾಪ್, ವಿಶ್ವ, ಶ್ರೀನಿವಾಸಪ್ರಭು ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ. ನಾಯಕಿಯ ಆಯ್ಕೆ ನಡೆಯುತ್ತಿದೆ.

ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆದಿದ್ದಾರೆ. ಕವಿರಾಜ್ ಗೀತರಚನೆ ಮಾಡಿದ್ದಾರೆ. ನಟರಾಜನ್ ಶಂಕರನ್ ಸಂಗೀತ ನಿರ್ದೇಶನ, ಕಿರಣ್ ಹಂಪಾಪುರ ಛಾಯಾಗ್ರಹಣ, ಮಧು ಸಂಕಲನ, ರವಿವರ್ಮ, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಮುರಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Leave a Reply

Your email address will not be published. Required fields are marked *