ಆಪ್ತನಿಗೆ ಮಂತ್ರಿಸ್ಥಾನ ಕೊಟ್ಟ ಬಿಎಸ್‍ವೈ – ಮಾಧುಸ್ವಾಮಿಗೆ ಸಚಿವ ಸ್ಥಾನ ಸಿಗಲು ಕಾರಣ ಏನು?

Public TV
2 Min Read
Madhuswamy

ಬೆಂಗಳೂರು: ಕೊನೆಯ ಕ್ಷಣದಲ್ಲಿ ಹಲವು ಟ್ವಿಸ್ಟ್ ಗಳನ್ನು ಪಡೆದುಕೊಂಡು ಕೊನೆಗೂ ಬಿಎಸ್ ಯಡಿಯೂರಪ್ಪನವರ ಕ್ಯಾಬಿನೆಟ್ ಇಂದು ರಚನೆಯಾಗುತ್ತಿದೆ. ಹಲವು ಸುತ್ತಿನ ಚರ್ಚೆಗಳು ನಡೆದು ಅಂತಿಮವಾಗಿ 17 ಮಂದಿ ಇಂದು ಬೆಳಗ್ಗೆ 10.30ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Krishna Byre Gowda Madhuswamy

ಮಾಧುಸ್ವಾಮಿಗೆ ಸಿಕ್ಕಿದ್ದು ಹೇಗೆ?
ತುಮಕೂರಿನ ಚಿಕ್ಕನಾಯಕನಹಳ್ಳಿಯ ಶಾಸಕರಾಗಿರುವ ಮಾಧುಸ್ವಾಮಿ ಹೆಚ್‍ಡಿಕೆ ಆಪರೇಷನ್ ಆಡಿಯೋ ಬಾಂಬ್ ಸಿಡಿಸಿದ್ದಾಗ ಬಿ.ಎಸ್.ವೈ ಬೆನ್ನಿಗೆ ನಿಂತಿದ್ದರು. ಸದನದ ಹೊರಗಡೆ ಮತ್ತು ಸದನದ ಒಳಗಡೆ ಬಿಎಸ್‍ವೈ ಪಾಲಿನ ಆಪತ್ಭಾಂಧವ ಎಂದೇ ಗುರುತಿಸಿಕೊಂಡಿದ್ದಾರೆ.

ಯಾವುದೇ ವಿಚಾರಗಳನ್ನು ನೇರ ನೇರವಾಗಿ ಹೇಳು ಮಾಧುಸ್ವಾಮಿ ಕಾನೂನು, ಆಡಳಿತ, ಕೃಷಿ, ಸೇರಿದಂತೆ ಹಲವು ವಿಷಯಗಳಲ್ಲಿ ಪರಿಣಿತಿ ಪಡೆದುಕೊಂಡಿದ್ದಾರೆ. ಉತ್ತಮ ಸಂಸದೀಯ ಪಟು ಆಗಿರುವ ಮಾಧುಸ್ವಾಮಿ ವಿಧಾನಸಭೆಯಲ್ಲಿ ಉತ್ತಮ ಮಾತುಗಾರನಾಗಿ ಗುರುತಿಸಿಕೊಂಡಿದ್ದಾರೆ. ಬಂಡಾಯ ಶಾಸಕರು ರಾಜೀನಾಮೆ ನೀಡಿದ ಬಳಿಕ ವಿಧಾನಸಭೆಯಲ್ಲಿ ನಡೆದ ಹೈಡ್ರಾಮದ ವೇಳೆ ಬಿಜೆಪಿ ಪರವಾಗಿ ಮಾಧುಸ್ವಾಮಿ ಒಬ್ಬರೇ ಎದ್ದು ನಿಂತು ಪ್ರಬಲವಾಗಿ ವಾದ ಮಂಡಿಸುತ್ತಿದ್ದರು. ಹೀಗಾಗಿ ಮಾಧುಸ್ವಾಮಿ ಸಚಿವರಾಗಿ ತಮ್ಮ ಜೊತೆಗಿದ್ದರೆ ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸಬಹುದು ಎಂದು ಹೈಕಮಾಂಡ್‍ಗೆ ಬಿಎಸ್ ಯಡಿಯೂರಪ್ಪ ಮನವರಿಕೆ ಮಾಡಿಕೊಟ್ಟಿದ್ದರು. ಇದನ್ನೂ ಓದಿ: ದೇವೇಗೌಡರನ್ನು ಹೊರಗೆ ಹಾಕಿದ್ದ ಕುಮಾರಸ್ವಾಮಿ – ಸಿಎಂ ವಿರುದ್ಧ ಮಾಧುಸ್ವಾಮಿ ಆರೋಪ

MADHUSWAMY 1 copy

ಜನತಾ ಪಕ್ಷ ಒಟ್ಟಿಗೆ ಇದ್ದಾಗ ಅದರಲ್ಲಿ ಮಾಧುಸ್ವಾಮಿ ಗುರುತಿಸಿಕೊಂಡಿದ್ದರು. ಆ ನಂತರ ರಾಮಕೃಷ್ಣ ಹೆಗ್ಗಡೆ ಜತೆ ಗುರುತಿಸಿಕೊಂಡರು. ಆ ನಂತರ ಯಡಿಯೂರಪ್ಪ ಬಿಜೆಪಿಗೆ ರಾಜೀನಾಮೆ ನೀಡಿ ಕೆಜೆಪಿ ಕಟ್ಟಿದಾಗ ಕೆಜೆಪಿಗೆ ಬಂದರು. ಬಳಿಕ ಯಡಿಯೂರಪ್ಪನವರು ಮುನಿಸು ಮರೆತು ಬಿಜೆಪಿಗೆ ಬಂದಾಗ ಅವರ ಜೊತೆ ಮರಳಿ ಕಮಲದ ಕಡೆ ಹೆಜ್ಜೆ ಹಾಕಿದ ನಾಯಕರ ಪೈಕಿ ಇವರು ಒಬ್ಬರು. ಈಗ ಮಂತ್ರಿ ಸ್ಥಾನ ಪಡೆಯುವ ಮೂಲಕ ಮುಂದಿನ ಲಿಂಗಾಯತ ನಾಯಕನಾಗಿ ಮಾಧುಸ್ವಾಮಿ ಹೊರಹೊಮ್ಮುವ ಸಾಧ್ಯತೆಯಿದೆ.

ಜೆಸಿ ಮಾಧುಸ್ವಾಮಿ ಅವರ ಮೂಲ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜಯಚಾಮರಾಜೇಂದ್ರ ಪುರ (ಜೆಸಿ ಪುರ). ಶಾಸಕರಾಗಿದ್ದರೂ ಮಾಧುಸ್ವಾಮಿ ಈಗಲೂ ಇಲ್ಲೇ ನೆಲೆಸಿದ್ದಾರೆ. ಮಾಧುಸ್ವಾಮಿ ಅವರ ಪಾಲಿಗೆ ಯಾವುದೇ ಎಲೆಕ್ಷನ್ ಇಲ್ಲ ಅಂದರೆ ಅವರು ಪೂರ್ಣಾವಧಿ ರೈತರಾಗುತ್ತಾರೆ. ಇದನ್ನೂ ಓದಿ: ಕರೀರಿ ಆ ಮಾಧುಸ್ವಾಮಿನ- ಶಾಸಕರ ವಿರುದ್ಧ ಬಿಎಸ್‍ವೈ ಕೆಂಡಾಮಂಡಲ

FINAL LIST

Share This Article
Leave a Comment

Leave a Reply

Your email address will not be published. Required fields are marked *