ದಾವಣಗೆರೆ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಶಾಸಕರು ರಾಜೀನಾಮೆ ನೀಡುತ್ತಿದ್ದು, ಇತ್ತ ಮೈತ್ರಿ ಸರ್ಕಾರ ಉಳಿಯಬೇಕು ಎಂಬ ಬೇಡಿಕೆಯನ್ನಿಟ್ಟು ಕಾರ್ಯಕರ್ತರು ಉರುಳು ಸೇವೆ ಮಾಡಿದ್ದಾರೆ.
ಹಳೇ ದಾವಣಗೆರೆಯಲ್ಲಿರುವ ನಗರ ದೇವತೆ ದುಗ್ಗಮ್ಮ ದೇವಸ್ಥಾನದಲ್ಲಿ ಜೆಡಿಎಸ್ ಕಾರ್ಯಕರ್ತರು ಉರುಳು ಸೇವೆ ಮಾಡಿದ್ದಾರೆ. ಮೊದಲು ದುಗ್ಗಮ್ಮ ದೇವಿಗೆ ಪೂಜೆ ಸಲ್ಲಿಸಿದ ಕಾರ್ಯಕರ್ತರು, ನಂತರ ಜೆಡಿಎಸ್ ಪಕ್ಷದ ಬ್ಯಾನರ್ ಹಿಡಿದು ಉರುಳು ಸೇವೆ ಕೈಗೊಂಡರು.
Advertisement
Advertisement
ಮುಖ್ಯಮಂತ್ರಿಯವರು ಮುಂದುವರಿಯಬೇಕು. ಹಾಗೆಯೇ ರಾಜ್ಯ ರಾಜಕಾರಣದಲ್ಲಿ ಇರುವ ಗೊಂದಲ ನಿವಾರಣೆಯಾಗಲಿ ಎಂದು ಕಾರ್ಯಕರ್ತರು ಈ ವೇಳೆ ಪ್ರಾರ್ಥನೆ ಮಾಡಿಕೊಂಡಿದ್ದಾರೆ.
Advertisement
ರಾಜೀನಾಮೆ ಕೊಟ್ಟ ಜೆಡಿಎಸ್ ಶಾಸಕರು:
* ಎಚ್ ವಿಶ್ವನಾಥ್- ಹುಣಸೂರು
* ಗೋಪಾಲಯ್ಯ- ಮಾಹಾಲಕ್ಷ್ಮಿ ಲೇ ಔಟ್
* ನಾರಾಯಣ ಗೌಡ- ಕೆ. ಆರ್ ಪೇಟೆ
Advertisement
ರಾಜೀನಾಮೆ ಕೊಟ್ಟ ಕೈ ಶಾಸಕರು:
* ರಾಮಲಿಂಗಾ ರೆಡ್ಡಿ- ಬಿಟಿಎಂ ಲೇ ಔಟ್
* ರಮೇಶ್ ಜಾರಕಿಹೊಳಿ- ಗೋಕಾಕ್
* ಎಸ್.ಟಿ ಸೋಮಶೇಖರ್- ಯಶವಂತಪುರ
* ಪ್ರತಾಪ್ ಗೌಡ ಪಾಟೀಲ್- ಮಸ್ಕಿ
* ಬಿ.ಸಿ ಪಾಟೀಲ್- ಹಿರೇಕೆರೂರು
* ಮಹೇಶ್ ಕುಮಟಳ್ಳಿ- ಅಥಣಿ
* ಭೈರತಿ ಬಸವರಾಜ್- ಕೆ.ಆರ್ ಪುರಂ
* ಶಿವರಾಂ ಹೆಬ್ಬಾರ್- ಯಲ್ಲಾಪುರ
* ಮುನಿರತ್ನ- ರಾಜರಾಜೇಶ್ವರಿ ನಗರ
* ರೋಷನ್ ಬೇಗ್- ಶಿವಾಜಿನಗರ
ಪಕ್ಷೇತರ ಶಾಸಕರು:
ಎಚ್. ನಾಗೇಶ್ – ಮುಳಬಾಗಿಲು
ಆರ್. ಶಂಕರ್ – ರಾಣೆಬೆನ್ನೂರು
ಒಟ್ಟಿನಲ್ಲಿ ಇಂದು ವಿಧಾನಸೌಧದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ(ಸಿಎಲ್‍ಪಿ) ನಡೆದಿದ್ದು, ಈ ವೇಳೆ ಶಾಸಕರಾದ, ಎಂಟಿಬಿ ನಾಗರಾಜ್, ಸುಧಾಕರ್ ಹಾಗೂ ತುಕಾರಾಂ ಅನಾರೋಗ್ಯದ ಕಾರಣ ನೀಡಿ ಸಭೆಗೆ ಗೈರಾದರೆ, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಯಾವುದೇ ಕಾರಣ ನೀಡಿಲ್ಲ. ಹೀಗಾಗಿ ಅವರ ನಡೆ ತೀವ್ರ ಕುತೂಹಲಕ್ಕೀಡು ಮಾಡಿದೆ.