ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಿಜೆಪಿ (BJP) ಜೊತೆ ಜೆಡಿಎಸ್ (JDS) ಮೈತ್ರಿ ವಿಚಾರ ಕುರಿತು ಮಾಜಿ ಸಚಿವ ಸಿಪಿ ಯೋಗೇಶ್ವರ್ (CP Yogeshwara) ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಕುರಿತು ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸಂಸದರನ್ನು ಗೆಲ್ಲಿಸಬೇಕು ಎಂಬ ಲೆಕ್ಕಾಚಾರ ಹಾಕಿಕೊಂಡಿದ್ದೇವೆ. ಆದರೆ ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಒಂದು ವೇಳೆ ಹೈಕಮಾಂಡ್ ಸ್ಪರ್ಧೆ ಮಾಡು ಎಂದರೆ ಮಾಡ್ತೀನಿ ಎಂದು ಯೋಗೇಶ್ವರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕನ ಅಪ್ಪಿ ಗೆಲುವಿಗೆ ಶುಭಹಾರೈಸಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ – ಗೌಪ್ಯ ಸಭೆ!
Advertisement
Advertisement
ಒಂದಷ್ಟು ರಾಜಕೀಯ ಬದಲಾವಣೆ ಆಗಬೇಕು. ಮುಂದೆ ಒಂದಷ್ಟು ಬದಲಾವಣೆ ಜೊತೆಗೆ ಚುನಾವಣೆ ಎದುರಿಸುತ್ತೇವೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಆಗಬಹುದು. ಇತ್ತೀಚಿನ ರಾಜಕೀಯ ಚರ್ಚೆ ಹಾಗೂ ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆ ಆಗ್ತಿದೆ. ಹೀಗಾಗಿ ಮೈತ್ರಿ ಆಗಬಹುದು ಎಂದುಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಸಿಪಿ ಯೋಗೇಶ್ವರ್ ತಿಳಿಸಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯ ಯೋಜನೆಗಿಲ್ಲ ಕೇಂದ್ರದ ಅಕ್ಕಿ – ಆಶಾಭಾವನೆಯಿಂದ ಬಂದ ನಮಗೆ ಎರಡನೇ ಬಾರಿ ನಿರಾಸೆ: ಮುನಿಯಪ್ಪ