-ಬಿಜೆಪಿ ಜೊತೆ ಕೈ ಜೋಡಿಸಲು ಸಿದ್ಧ
ಕೊಪ್ಪಳ: ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಇರಬಹುದು. ಆದ್ರೆ, ಗಂಗಾವತಿಯಲ್ಲಿ ಅದು ಸಾಧ್ಯವಿಲ್ಲ ಎಂದು ಜೆಡಿಎಸ್‍ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಹೈಕಮಾಂಡ್ ಉಸ್ತುವಾರಿ ಎಚ್‍ಆರ್ ಶ್ರೀನಾಥ್ ಹೇಳಿದ್ದಾರೆ.
ಕೊಪ್ಪಳದ ಗಂಗಾವತಿ ನಗರಸಭೆ ಚುನಾವಣೆ ಫಲಿತಾಂಶದಲ್ಲಿ ಅತಂತ್ರ ಸ್ಥಿತಿ ಎದುರಾದರೆ ಬಿಜೆಪಿ ಜೊತೆ ಕೈ ಜೋಡಿಸುತ್ತೇವೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಜೊತೆ ಒಪ್ಪಂದ ಎಂದು ತಿಳಿಸಿದ್ದಾರೆ. ಗಂಗಾವತಿ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರವಾಗೋ ಸಾಧ್ಯತೆ ಇದೆ. ಅಧಿಕಾರ ಹಿಡಿಯುವಲ್ಲಿ ಜೆಡಿಎಸ್ ಪ್ರಮುಖ ಪಾತ್ರ ವಹಿಸಲಿದೆ. ಹೀಗಾಗಿ ನಾವು ಬಿಜೆಪಿ ಜತೆ ಒಪ್ಪಂದ ಮಾಡಿಕೊಂಡಿದ್ದೇವೆ. ಬಿಜೆಪಿ ಬೆಂಬಲ ಕೊಟ್ಟರೆ ನಾವು ಸ್ವಾಗತ ಮಾಡುತ್ತೀವಿ ಅವರ ಜೊತೆ ಕೈ ಜೋಡಿಸುತ್ತಿವಿ ಎಂದು ಅವರು ತಿಳಿಸಿದ್ದಾರೆ.
ಗಂಗಾವತಿಯಲ್ಲಿ ನಾವು ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಅನ್ಸಾರಿ ಕುಮಾರಸ್ವಾಮಿ ಅವರನ್ನು ನಾಯಕ ಎಂದು ಒಪ್ಪುದಿಲ್ಲವಂತೆ. ಈ ಕಾರಣಕ್ಕೆ ನಾವು ಯಾವತ್ತೂ ಕಾಂಗ್ರೆಸ್ ಜೊತೆ ಹೋಗಲ್ಲ. ನಮ್ಮ ನಾಯಕರಿಗೆ ಗಂಗಾವತಿ ಕಾಂಗ್ರೆಸ್ ಮುಖಂಡರಿಂದ ಮರ್ಯಾದೆ ಇಲ್ಲ. ಈ ಕಾರಣಕ್ಕೆ ನಾವು ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv