– ಘಟನೆಗೆ ಶಾಸಕ ಶಿವಲಿಂಗೇಗೌಡ ತೀವ್ರ ಆಕ್ರೋಶ
ಹಾಸನ: ಆಕ್ಸಿಜನ್ ಘಟಕ ಉದ್ಘಾಟನೆ ವೇಳೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಘಟನೆಗೆ ಶಾಸಕ ಶಿವಲಿಂಗೇಗೌಡ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಹಾಸನ ಜಿಲ್ಲೆಯ, ಅರಸೀಕೆರೆ ನಗರದ ಸರ್ಕಾರಿ ಜೆಸಿ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಘಟಕ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವ್ಯಕ್ತಿಯೊಬ್ಬರು ಆಸ್ಪತ್ರೆ ಕ್ವಾರ್ಟರ್ಸ್ ಒಳಚರಂಡಿ ನೀರು ಶಿವಾನಂದ ಕಾಲೋನಿ ರಸ್ತೆ ಮೇಲೆ ಹರಿಯುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಹಾನಗಲ್ ಉಪಚುನಾವಣೆ: ಕಾಂಗ್ರೆಸ್‍ನಲ್ಲೂ ಫೈನಲ್ ಆಗಿಲ್ಲ ಅಭ್ಯರ್ಥಿ ಹೆಸರು
ಈ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು, ಆಸ್ಪತ್ರೆ ವ್ಯಾಪ್ತಿಯಲ್ಲಿ ಬರುವ ಬಿಜೆಪಿಯ ನಗರಸಭೆ ಸದಸ್ಯರನ್ನು ಕಡೆಗಣಿಸಿ ಅವಮಾನ ಮಾಡಲಾಗುತ್ತಿದೆ ಎಂದು ಸಭೆಯಲ್ಲಿಯೇ ಶಾಸಕ ಶಿವಲಿಂಗೇಗೌಡ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ತಾಲಿಬಾನ್ ಬೆಂಬಲಿಸಿ ರ‍್ಯಾಲಿ – 1,000ಕ್ಕೂ ಹೆಚ್ಚು ಜನ ಭಾಗಿ
ಈ ಹಿನ್ನೆಲೆ ವೇದಿಕೆಯಲ್ಲೇ ಜೋರು ಧ್ವನಿಯಲ್ಲಿ ಶಿವಲಿಂಗೇಗೌಡ ಅಸಮಾಧಾನ ಹೊರಹಾಕಿದರು. ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ಸ್ವಲ್ಪ ತಿಳಿಯಾಗಿದ್ದರೂ, ಗಲಾಟೆಯಿಂದ ಸಮಾರಂಭ ಗೊಂದಲದ ಗೂಡಾದಂತಾಗಿತ್ತು.