ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮಗಿಂತ ಜೆಡಿಎಸ್ – ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ: ಡಿಕೆಶಿ

Public TV
2 Min Read
DK Shivakumar 7

ನವದೆಹಲಿ: ಪ್ರಜ್ವಲ್ ರೇವಣ್ಣಗೆ (Prajwal Revanna) ಜೀವಾವಧಿ ಶಿಕ್ಷೆಯಾಗಿರುವ ಬಗ್ಗೆ ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ತೀರ್ಪಿನ ಬಗ್ಗೆ ನನ್ನ ಪ್ರತಿಕ್ರಿಯೆ ಕೇಳುವುದಕ್ಕಿಂತ ಅವರದ್ದೇ ಪಕ್ಷ ಜೆಡಿಎಸ್ (JDS) ಹಾಗೂ ಅವರ ಮೈತ್ರಿ ಪಕ್ಷ ಬಿಜೆಪಿ (BJP) ನಾಯಕರನ್ನು ಕೇಳಬೇಕು. ಏನು ಸರಿ, ಏನು ಸರಿಯಿಲ್ಲ ಎಂದು ಅವರು ಹೇಳಬೇಕು. ಅವರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡುವ ಶಕ್ತಿ, ಸಾಮರ್ಥ್ಯ ಇದೆ. ಜೆಡಿಎಸ್ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರು, ಯುವ ಘಟಕದ ಅಧ್ಯಕ್ಷರು ಪ್ರತಿಕ್ರಿಯೆ ನೀಡಲಿ. ನಾವು ಕಾನೂನಿಗೆ ಗೌರವ ಕೊಟ್ಟು, ಅದು ಹೇಳಿದಂತೆ ಕೇಳಿಕೊಂಡು ಬರುತ್ತೇವೆ. ಅಶೋಕ್, ನಾರಾಯಣಸ್ವಾಮಿ, ಸಿಟಿ ರವಿ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: Belagavi | ಮುಸ್ಲಿಂ ಹೆಡ್ ಮಾಸ್ಟರ್ ವರ್ಗಾವಣೆ ಮಾಡಲು ಮಕ್ಕಳಿಗೆ ವಿಷವಿಟ್ಟ ಪಾಪಿಗಳು

ವಿಚಾರಣೆ ವೇಳೆಯಲ್ಲೂ ಪ್ರಜ್ವಲ್ ರೇವಣ್ಣ ಇದನ್ನು ಷಡ್ಯಂತ್ರ ಎಂದು ವಾದ ಮಂಡಿಸಿದ್ದಾರೆ ಎಂಬ ಕುರಿತು ಪ್ರತಿಕ್ರಿಯಿಸಿ, ನನಗೆ ಆ ಬಗ್ಗೆ ಗೊತ್ತಿಲ್ಲ. ಅವರು ನ್ಯಾಯಾಲಯದಲ್ಲಿ ಕೊಟ್ಟಿರುವ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕಲಬುರಗಿ ಕರ್ನಾಟಕ ಕೇಂದ್ರಿಯ ವಿವಿ ವಿದ್ಯಾರ್ಥಿನಿ ಕೆನ್ನೆಗೆ ಮುತ್ತಿಟ್ಟ ಕ್ಯಾಂಟೀನ್ ಓನರ್

ರಾಹುಲ್ ಗಾಂಧಿ ತಮ್ಮ ಸಂದೇಶ ನೀಡಿದ್ದಾರೆ:
ರಾಹುಲ್ ಗಾಂಧಿ ಅವರ ಪ್ರತಿಭಟನೆ ಬಗ್ಗೆ ಮಾತನಾಡಿ, ನಾನು ಈ ವಿಚಾರವಾಗಿ ಹೆಚ್ಚು ಚರ್ಚೆ ಮಾಡುವುದಿಲ್ಲ. ರಾಹುಲ್ ಗಾಂಧಿ ಅವರು ತಮ್ಮ ಸಂದೇಶ ತಿಳಿಸಲಿದ್ದಾರೆ. ಸಂವಿಧಾನ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ ಹೋರಾಟದ ವಿಚಾರವಾಗಿ ರಾಹುಲ್ ಗಾಂಧಿ ಅವರು ದೇಶಕ್ಕೆ ತಮ್ಮ ಸಂದೇಶ ರವಾನಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಭಾರತದ ಮೇಲೆ ಅಮೆರಿಕ 25% ಟ್ಯಾರಿಫ್‌ – ‘ಸ್ವದೇಶಿ’ ವಸ್ತು ಖರೀದಿಸಿ: ಮೋದಿ ಕರೆ

ರಾಹುಲ್ ಗಾಂಧಿ ಅವರ ಪ್ರತಿಭಟನೆ ದಿನ ಸಾರಿಗೆ ನೌಕರರ ಮುಷ್ಕರದ ಬಗ್ಗೆ ಪ್ರತಿಕ್ರಿಯಿಸಿ, ಅವರು ತಮ್ಮದೇ ಆದ ವಿಚಾರ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಈ ಹಿಂದೆ ಸಮಯಾವಕಾಶ ಕೇಳಿದ್ದರು. ಅವರನ್ನು ಕರೆದು ಮಾತನಾಡಬೇಕು ಎಂದು ಸಿಎಂ ಹೇಳಿದ್ದರು. ಈಗಾಗಲೇ ನಮ್ಮ ಸಾರಿಗೆ ಸಚಿವರು ಕರೆಸಿ ಮಾತನಾಡಿದ್ದಾರೆ. ಅದನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಲಾಗುವುದು ಎಂದರು. ಇದನ್ನೂ ಓದಿ: ಪತ್ನಿಗೆ ಅಕ್ರಮ ಸಂಬಂಧ – ಎರಡು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ

Share This Article