ಬೆಂಗಳೂರು: ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಗುರುತಿಸಿಕೊಂಡಿರುವ ಮಾಧ್ಯಮಗಳಿಗೆ ಜೆಡಿಎಸ್ ಬಹಿಷ್ಕಾರ ಹಾಕಿದೆ.
ಇನ್ನು ಮುಂದೆ ಯಾರು ಮಾಧ್ಯಮಗಳ ಚರ್ಚೆಗೆ ಹೋಗಬಾರದು, ಯಾವುದೇ ಮಾಹಿತಿಯನ್ನು ನೀಡಬಾರದು ಅಂತ ಜೆಡಿಎಸ್ ಅಧಿಕೃತ ಆದೇಶ ಹೊರಡಿಸಿದೆ. ಹೀಗಾಗಿ ಪಕ್ಷದ ನಾಯಕರು, ವಕ್ತಾರರು ಹಾಗೂ ಶಾಸಕರು ಮಾಧ್ಯಮಗಳಿಂದ ದೂರ ಉಳಿಯುತ್ತಿದ್ದಾರೆ ಎಂದು ಜೆಡಿಎಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ನಗರದಲ್ಲಿ ಶುಕ್ರವಾರ ನಡೆದಿದ್ದ ಜೆಡಿಎಸ್ ಶಾಸಕಾಂಗ ಸಭೆಯ ಬಳಿಕ ಮಾತನಾಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು, ಮಾಧ್ಯಮಗಳ ಚರ್ಚೆಗೆ ಜೆಡಿಎಸ್ ನಾಯಕರು ಬರುವುದಿಲ್ಲ. ನಮ್ಮ ನಾಯಕರು ಈ ಬಗ್ಗೆ ನಮಗೆ ತಿಳಿಸಿದ್ದಾರೆ. ಮಾಧ್ಯಮಗಳ ನಡೆಯುವ ಚರ್ಚೆಗಳಿಗೆ ಜೆಡಿಎಸ್‍ನಿಂದ ಹಲವರು ಹೋಗುತ್ತಿದ್ದಾರೆ. ಹೀಗಾಗಿ ಪಕ್ಷದಿಂದ ವಕ್ತಾರರ ಪಟ್ಟಿ ಸಿದ್ಧ ಪಡಿಸಲಾಗುತ್ತದೆ. ಅಲ್ಲಿಯವರೆಗೆ ಮಾಧ್ಯಮಗಳ ಚರ್ಚೆಗೆ ಹೋಗದಂತೆ ಪಕ್ಷದ ಎಲ್ಲರಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.
ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳ ವಿರುದ್ಧ ಗುಡುಗಿದ್ದರು. ಅಷ್ಟೇ ಪುತ್ರ ನಿಖಿಲ್ ಸೋಲಿನ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಸರಿಯಾಗಿ ಪ್ರತಿಕ್ರಿಯೆ ನೀಡದೇ ದೂರ ಉಳಿಯುತ್ತಿದ್ದಾರೆ.