ಮಂಡ್ಯ: ಇಂದು 15 ಕ್ಷೇತ್ರಗಳಲ್ಲಿ ಉಪಚುನಾವಣೆ ಮತದಾನ ನಡೆಯುತ್ತಿದ್ದು, ಕೆ.ಆರ್ ಪೇಟೆ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಅವರು ವಾಸ್ತುಪ್ರಕಾರ ಮತಯಂತ್ರ ತಿರುಗಿಸಿಟ್ಟು ವೋಟ್ ಮಾಡಿದ್ದಾರೆ.
ಕೆ.ಆರ್ ಪೇಟೆ ತಾಲೂಕಿನ ಬಂಡಿಹೊಳೆ ಮತಗಟ್ಟೆ ಸಂಖ್ಯೆ 151ರಲ್ಲಿ ಮತದಾನ ಮಾಡಿದ ದೇವರಾಜು, ಚುನಾವಣಾ ಸಿಬ್ಬಂದಿ ಮತಯಂತ್ರವಿಟ್ಟಿದ್ದ ವಾಸ್ತು ಸರಿಯಿಲ್ಲವೆಂದು, ಸಿಬ್ಬಂದಿ ಕರೆದು ಇವಿಎಂ ತಿರುಗಿಸಿದ ನಂತರವೇ ವೋಟ್ ಮಾಡಿದರು. ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದ ವೋಟ್ ಹಾಕಿ ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಭಾಗಿ ಆಗಬೇಕೆಂದು ಮನವಿ ಮಾಡಿಕೊಂಡರು.
Advertisement
Advertisement
ಇತ್ತ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಅವರು ಮತಯಂತ್ರದ ಬಳಿ ಚಪ್ಪಲಿ ಬಿಟ್ಟು ನಂತರ ಮತದಾನ ಮಾಡಿದರು. ಕೆ.ಆರ್ ಪೇಟೆ ಪಟ್ಟಣದಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಮತಗಟ್ಟೆಯಲ್ಲಿ ನಾರಾಯಣಗೌಡರು ಕುಟುಂಬದ ಜೊತೆ ಬಂದು ಮತದಾನ ಮಾಡಿದರು.
Advertisement
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಅನರ್ಹ ಶಾಸಕ ನಾರಾಯಣಗೌಡರು ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಇತ್ತ ಕಾಂಗ್ರೆಸ್‍ನಿಂದ ಕೆ.ಬಿ.ಚಂದ್ರಶೇಖರ್ ಕಣದಲ್ಲಿದ್ದಾರೆ.