ಕೋಲಾರ: ಜೆಡಿಎಸ್ (JDS) ಅಭ್ಯರ್ಥಿ ಎಂ.ಮಲ್ಲೇಶ್ ಬಾಬು (Mallesh Babu) ಕೋಲಾರ (Kolar) ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಕಾಂಗ್ರೆಸ್‌ನ (Congress) ಕೆ.ವಿ.ಗೌತಮ್ (K.V.Gowtham) ವಿರುದ್ಧ ಬಾಬು ಅವರು 71,388 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಗೌತಮ್ ಒಟ್ಟು 6,20,093 ಹಾಗೂ ಮಲ್ಲೇಶ್ ಬಾಬು 6,91,481 ಮತಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ಅಂಜಲಿ ನಿಂಬಾಳ್ಕರ್ ವಿರುದ್ಧ ಕಾಗೇರಿಗೆ ಗೆಲುವು- ಉತ್ತರಕನ್ನಡದಲ್ಲಿ ಸಂಭ್ರಮಾಚರಣೆ
ಗೆಲುವಿನ ಕುರಿತು ಮಾತನಾಡಿದ ಬಾಬು, ಕ್ಷೇತ್ರದ ಜನತೆಗೆ ಚಿರಋಣಿ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದಗಳು. ದೇವೇಗೌಡರು ಮತ್ತು ಕುಮಾರಸ್ವಾಮಿ ನಂಬಿಕೆಯಿಟ್ಟು ಟಿಕೆಟ್ ಕೊಟ್ಟಿದ್ದರು. ಅದಕ್ಕೆ ತಕ್ಕ ಉತ್ತರ ಸಿಕ್ಕಿದೆ. ಎಲ್ಲಾ ಕ್ಷೇತ್ರಗಳಲ್ಲೂ ಬಹುಮತ ಸಿಕ್ಕಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಗ್ಯಾರೆಂಟಿ ವರ್ಕೌಟ್ ಆಗಿಲ್ಲ. ಸ್ವಲ್ಪ ಹೆಚ್ಚು ಕಡಿಮೆಯಾಗಿದೆ. ಅದರ ಲಾಭ ನಮಗೆ ಸಿಕ್ಕಿದೆ. ಒಂದು ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತ ಮಾಡಿದೆ. 6 ಲಕ್ಷ ಮತಗಳನ್ನು ಮತದಾರರು ನೀಡಿದ್ದಾರೆ. ಬಂಗಾರಪೇಟೆಯ ಜನತೆ ನನಗೆ ಬಹುಮತ ನೀಡಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ಗೆದ್ದು ಬೀಗಿದ ಹೆಚ್.ಡಿ ಕುಮಾರಸ್ವಾಮಿ
ನೀರಾವರಿ ಯೋಜನೆ ಮತ್ತು ಯುವಕರಿಗೆ ಉದ್ಯೋಗ ಕೊಡುವ ಭರವಸೆ ನೀಡಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುವೆ. ಕುಮಾರಸ್ವಾಮಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಗಲಿದ್ದೀಯಾ? ಅದು ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಹೇಳಿದರು.