ಬೆಂಗಳೂರು: ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಗೊಂದಲ ಬಹುತೇಕ ಬಗೆ ಹರಿದಿದ್ದು, ಸೀಟ್ ಹಂಚಿಕೆ ಅಂತಿಮವಾಗಿದೆ. ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದರೆ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ.
ಕೇರಳದ ಕೊಚ್ಚಿಯಲ್ಲಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಜೊತೆ ಮಾತುಕತೆ ನಡೆದಿದ್ದು, ಸೀಟು ಹಂಚಿಕೆ ಸೂತ್ರಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
Advertisement
Advertisement
ಉತ್ತರ ಕನ್ನಡ, ಚಿಕ್ಕಮಗಳೂರು- ಉಡುಪಿ, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ, ವಿಜಯಪುರ ಜೆಡಿಎಸ್‍ಗೆ ಸಿಕ್ಕಿದೆ. ಇಬ್ಬರ ಮಧ್ಯೆ ಚರ್ಚೆಗೆ ಕಾರಣವಾಗಿದ್ದ ಮೈಸೂರು ಕ್ಷೇತ್ರ ಕಾಂಗ್ರೆಸ್ಸಿಗೆ ಸಿಕ್ಕಿದೆ.
Advertisement
ಕೊನೆಗೂ ಗೆದ್ದ ಸಿದ್ದರಾಮಯ್ಯ: ಮಾಜಿ ಸಿಎಂ ಸಿದ್ದರಾಮಯ್ಯನವರು ಮೈಸೂರು ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಜೆಡಿಎಸ್ಸಿಗೆ ಬಿಟ್ಟು ಕೊಡಲೇ ಬಾರದು ಎನ್ನುವ ಹಠಕ್ಕೆ ಬಿದ್ದಿದ್ದರು. ಆದರೆ ಜೆಡಿಎಸ್ ಮೈಸೂರು ಬೇಕೆಂದು ಹಠ ಹಿಡಿದಿತ್ತು. ಆದರೆ ಕೊನೆಯಲ್ಲಿ ಜೆಡಿಎಸ್ ತನ್ನ ಹಠದಿಂದ ಹಿಂದಕ್ಕೆ ಸರಿದಿದ್ದು ಸಿದ್ದರಾಮಯ್ಯ ಕೈ ಮೇಲಾಗಿದೆ. ಇದನ್ನೂ ಓದಿ: ನೀವೆಲ್ಲಾ ನನ್ನನ್ನು ಏನ್ ಅಂದುಕೊಂಡಿದ್ದೀರಿ: ಕೈ ಸಭೆಯಲ್ಲಿ ಸಿದ್ದರಾಮಯ್ಯ ಕೆಂಡಾಮಂಡಲ
Advertisement
ಕಾಂಗ್ರೆಸ್ ನಾಯಕರು ಹಾಲಿ ಸಂಸದರು ಪ್ರತಿನಿಧಿಸುವ ಕ್ಷೇತ್ರಗಳನ್ನು ಜೆಡಿಎಸ್‍ಗೆ ನೀಡುವುದಿಲ್ಲ ಎಂದು ಹೇಳಿದ್ದರು. ಆದರೆ ಅಂತಿಮ ಮಾತುಕತೆಯಲ್ಲಿ ಮುದ್ದಹನುಮೇಗೌಡ ಅವರು ಪ್ರತಿನಿಧಿಸಿದ್ದ ತುಮಕೂರು ಕ್ಷೇತ್ರವನ್ನು ನೀಡಲು ಒಪ್ಪಿಗೆ ನೀಡಿದ್ದಾರೆ.
ಆರಂಭದಲ್ಲಿ ಜೆಡಿಎಸ್ 12 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ ಎನ್ನುವ ಮಾಹಿತಿ ಸಿಕ್ಕಿತ್ತು. ನಂತರ 10 ಕ್ಷೇತ್ರ, ಬಳಿಕ ಈಗ 8 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುವುದು ಅಂತಿಮವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv