– ಸರ್ಕಾರದ ವಿರುದ್ಧ ಹೋರಾಟಕ್ಕೂ ಪ್ಲಾನ್
ಬೆಂಗಳೂರು: ಜೆಡಿಎಸ್‌ನ ಕೋರ್ ಕಮಿಟಿ ಸಭೆ ಇಂದು ನಡೆಯಲಿದ್ದು, ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.
Advertisement
ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ.
Advertisement
Advertisement
ಈಗಾಗಲೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದ ವರಿಷ್ಠರ ಆದೇಶದ ಮೇರೆಗೆ ಅಮಾನತು ಮಾಡಲಾಗಿದೆ. ಅಮಾನತು ಬದಲಾಗಿ ಪಕ್ಷಕ್ಕೆ ಆಗಿರುವ ಮುಜುಗರದಿಂದ ತಪ್ಪಿಸಿಕೊಳ್ಳಲು ಉಚ್ಚಾಟನೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.
Advertisement
ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಜ್ವಲ್ ವಿರುದ್ಧ ಕಠಿಣ ಶಿಕ್ಷೆ ಬಗ್ಗೆ ಪ್ರಸ್ತಾಪ ಬೆನ್ನಲ್ಲೇ ಪ್ರಜ್ವಲ್ ಉಚ್ಚಾಟನೆ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಉಚ್ಚಾಟನೆ ಮಾಡುವುದು ಪಕ್ಕಾ. ಆದರೆ ಫಲಿತಾಂಶ ಮುಂಚೆಯೋ ಅಥವಾ ನಂತರವೋ ಎನ್ನುವುದು ಕುತೂಹಲ ಮೂಡಿಸಿದೆ.
ಯಾವಾಗ ಉಚ್ಚಾಟನೆ ಮಾಡಬೇಕು ಎಂಬುದರ ಕುರಿತು ಇವತ್ತಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದರ ಜೊತೆ ರಾಜ್ಯಾದ್ಯಂತ ಡಿ.ಕೆ.ಶಿವಕುಮಾರ್ ವಿರುದ್ಧ ಹೋರಾಟಕ್ಕೂ ಇಂದಿನ ಕೋರ್ ಕಮಿಟಿಯಲ್ಲಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಪೆನ್‌ಡ್ರೈವ್ ಹಂಚಿಕೆ ಮಾಡಿರುವುದು ಡಿ.ಕೆ.ಶಿವಕುಮಾರ್ ಎಂದು ಕುಮಾರಸ್ವಾಮಿ, ದೇವರಾಜೇಗೌಡ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಕೆಶಿ ವಿರುದ್ಧ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ. ಇದರ ಜೊತೆಗೆ ಎಂಎಲ್‌ಸಿ ಚುನಾವಣೆ ಬಗ್ಗೆ, ಬಿಜೆಪಿ-ಜೆಡಿಎಸ್ ಮೈತ್ರಿ ಆಗಬೇಕಾ? ಬೇಡವಾ ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ.