ರಾಮನಗರ: ಜಿಲ್ಲೆ ಮರುನಾಮಕರಣಕ್ಕೆ ವಿರೋಧ ಮಾಡುತ್ತಿರುವುದು ಜೆಡಿಎಸ್‌ನವರಲ್ಲ (JDS), ಬದಲಾಗಿ ಹಾಸನದವರು ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ (HD Kumaraswamy) ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ (HC Balakrishna) ತಿರುಗೇಟು ನೀಡಿದ್ದಾರೆ.
ರಾಮನಗರ (Ramanagara) ಜಿಲ್ಲೆ ಮರುನಾಮಕರಣಕ್ಕೆ ಜೆಡಿಎಸ್ ವಿರೋಧ ವಿಚಾರ ಕುರಿತು ಮಾಗಡಿಯಲ್ಲಿ ಮಾತನಾಡಿದ ಅವರು, ಹಾಸನದವರಿಗೆ ಬೆಂಗಳೂರಿನ ಗಮ್ಮತ್ತು ಗೊತ್ತಿಲ್ಲ. ಆದ್ದರಿಂದ ಇದಕ್ಕೆ ವಿರೋಧ ಮಾಡುತ್ತಿದ್ದಾರೆ. ನಮಗೂ ಬೆಂಗಳೂರಿಗೂ ಅವಿನಾಭಾವ ಸಂಬಂಧ ಇದೆ. ನಾವು ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯವರೇ. ರಾಮನಗರ ಹೆಸರು ಬದಲಾವಣೆ ಆದರೆ ಕಚೇರಿಗಳು ಎಲ್ಲೂ ಹೋಗಲ್ಲ. ರಾಮನಗರವೇ ಜಿಲ್ಲಾ ಕೇಂದ್ರವಾಗಿರುತ್ತದೆ. ಆದರೆ ಬೆಂಗಳೂರು ದಕ್ಷಿಣ ಎಂಬ ಹೆಸರು ಬದಲಾವಣೆಗೆ ಮನವಿ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ – ಜನಜೀವನ ಅಸ್ತವ್ಯಸ್ತ
ಇನ್ನೂ ಮುಡಾ ಬಹುಕೋಟಿ ಹಗರಣ ವಿಚಾರ ಕುರಿತು ಮಾತನಾಡಿ, ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ ಮುಡಾ ಭೂಸ್ವಾಧೀನ ಮಾಡಿದ ಬಳಿಕ ಜಾಗದ ಮಾಲೀಕರಿಗೆ 50:50 ಅನುಪಾತದಲ್ಲಿ ಸೈಟ್ ಹಂಚುತ್ತಾರೆ. ಅದೇ ರೀತಿ ಸಿಎಂ ಕೂಡ ಸೈಟ್ ಪಡೆದಿದ್ದಾರೆ. ಇಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಂತೆ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ