ಮಂಡ್ಯ: ಜಿಲ್ಲೆಯ ಮದ್ದೂರಿನ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಗೊಂದಲದ ಸದುಪಯೋಗ ಪಡೆದುಕೊಳ್ಳಲು ಮುಂದಾಗಿರುವ ಜೆಡಿಎಸ್ ಪಕ್ಷ ಕಾಂಗ್ರೆಸ್ ಕಾರ್ಯಕರ್ತರನ್ನು ತನ್ನತ್ತ ಸೆಳೆಯಲು ಮುಂದಾಗಿದೆ.
ಮೊದಲ ಪ್ರಯತ್ನವಾಗಿ ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ಅವರ ಸಂಬಂಧಿಯಾಗಿದ್ದ ಪ್ರವೀಣ್ ಸೇರಿದಂತೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಕಲ್ಪನಾ ಸಿದ್ದರಾಜು ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಕೈ ತಪ್ಪಿದ್ದರ ಬಗ್ಗೆ ಕಣ್ಣೀರು ಹಾಕಿದ್ದರು.
Advertisement
Advertisement
ಈ ಹಿನ್ನೆಲೆಯಲ್ಲಿ ಕಲ್ಪನಾ ಸಿದ್ದರಾಜು ಬೆಂಬಲಿಗರು, ಹಿತೈಷಿಗಳು ಕಾಂಗ್ರೆಸ್ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದರು. ಹೀಗಾಗಿ ಬೆಂಗಳೂರಿನಿಂದ ಮೈಸೂರು ಕಡೆ ಹೊರಟಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರೇ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಕಲ್ಪನಾ ಸಿದ್ದರಾಜು ಸಂಬಂಧಿ ಮದ್ದೂರಿನ ಪ್ರವೀಣ್ ಅವರ ಮನೆಗೆ ಭೇಟಿ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
Advertisement
ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಪ್ರವೀಣ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುವ ಉದ್ದೇಶದಿಂದ ನಾನು ಭೇಟಿ ನೀಡಿದ್ದೇನೆ ಎಂದು ತಿಳಿಸಿದ್ದರು. ಇನ್ನು ಕುಮಾರಸ್ವಾಮಿ ಸೆಕ್ಯುಲರ್ ಅಲ್ಲ ಎಂದು ಹೇಳಿದ್ದ ಜಮೀರ್ ಮಾತಿಗೆ ತಿರುಗೇಟು ನೀಡಿ, ನಾನು ಜಾತ್ಯಾತೀತ ಅನ್ನೋದನ್ನ ಜಮೀರ್ ಅವರಿಂದ ಕಲಿಯಬೇಕಿಲ್ಲ ಅಂತ ಆಕ್ರೋಶ ಹೊರಹಾಕಿದ್ರು.