ಕಳ್ಳಕಾಕರಿಗೆ ಸಿಎಂ ಚಿನ್ನದ ಪದಕ ಭಾಗ್ಯ – ಜೆಡಿಎಸ್ ತೀವ್ರ ವಾಗ್ದಾಳಿ

Public TV
1 Min Read
JDS FLAG 1

ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ನಿಷ್ಠಾವಂತ ಅಧಿಕಾರಿಗಳಿಗೆ ಕಿರುಕುಳ ಹಾಗೂ ವರ್ಗಾವಣೆ ಭಾಗ್ಯ ನೀಡಿ, ಕಳ್ಳಕಾಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕದ ಭಾಗ್ಯ ನೀಡುತ್ತಿದೆ ಎಂದು ಜೆಡಿಎಸ್ (JDS) ಗಂಭೀರ ಆರೋಪ ಮಾಡಿದೆ.

ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್, ಸುರಪುರ ಉಪ ವಿಭಾಗದ ಡಿವೈಎಸ್ಪಿ ಜಾವೀದ್ ಇನಾಂದಾರ್ ಹೆಸರನ್ನು 2023ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಶಿಫಾರಸ್ಸು ಮಾಡಿರುವ ವಿಚಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜಾವೀದ್ ವಿರುದ್ಧ ತೀವ್ರ ಆರೋಪಗಳಿವೆ. ಆದರೂ ಅವರನ್ನು ಚಿನ್ನದ ಪದಕಕ್ಕೆ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಇದನ್ನೂ ಓದಿ: ದೆಹಲಿಯ ಯಮುನಾ ಬಳಿಯ ಪ್ರಾಚೀನ ಶಿವಮಂದಿರ ಕೆಡವಲು ನೀಡಿದ ಆದೇಶ ಎತ್ತಿಹಿಡಿದ ಸುಪ್ರೀಂ

ಪೊಲೀಸ್ ಇಲಾಖೆ (Police Department) ಜಪ್ತಿ ಮಾಡಿದ್ದ 4.9 ಕೆಜಿ ಚಿನ್ನವನ್ನು ಕಳವು ಮಾಡಿರುವ ಆರೋಪಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಕೊಡಲು ಸರ್ಕಾರ ಮುಂದಾಗಿದೆ. ಅಲ್ಲದೇ ಈತನ ವಿರುದ್ಧ ಈಗಾಗಲೇ ಪಡಿತರ ಅಕ್ಕಿ ಕಳ್ಳತನ ಸೇರಿದಂತೆ ಅನೇಕ ಆರೋಪಗಳಿವೆ. ಅಂಥವರಿಗೆ ಚಿನ್ನದ ಪದಕ ನೀಡಿ, ನಿಷ್ಠಾವಂತರಿಗೆ ಕಿರುಕುಳ ಹಾಗೂ ವರ್ಗಾವಣೆ ಭಾಗ್ಯ ನೀಡುತ್ತಿದೆ ಎಂದು ಟೀಕಿಸಿದೆ.

ಮುಖ್ಯಮಂತ್ರಿಗಳ ಚಿನ್ನದ ಪದಕ ಕೊಡಲು ಮುಂದಾಗಿರುವುದು ನೋಡಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಪದಕಗಳೂ ಮಾರಾಟಕ್ಕೆ ಇದೆಯೇ? ಎಂಬ ಅನುಮಾನ ಮೂಡುತ್ತಿದೆ ಎಂದು ಜೆಡಿಎಸ್ ಕುಟುಕಿದೆ. ಈ ವಿಚಾರವಾಗಿ ಗುರುಮಿಠಕಲ್ ಶಾಸಕ ಶ್ರೀ ಶರಣಗೌಡ ಕಂದಕೂರು ಅವರು ಸರ್ಕಾರಕ್ಕೆ ಪತ್ರ ಬರೆದು, ತನಿಖೆ ನಡೆಸಲು ಆಗ್ರಹಿಸಿದ್ದಾರೆ ಎಂದು ಟ್ವೀಟ್‍ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಹಿಂದೆ ಪಾಕ್‌ ಕೈವಾಡ – ರಹಸ್ಯ ಬಯಲು!

Share This Article