ಕೊಪ್ಪಳ: ಜೆಡಿಎಸ್ ಮುಖಂಡರೊಬ್ಬರು ತಮ್ಮ ಹುಟ್ಟುಹಬ್ಬವನ್ನು ತಲ್ವಾರ್‌ನಿಂದ ಕೇಕ್ ಕತ್ತರಿಸಿ ಆಚರಿಸುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜೆಡಿಎಸ್ ಮುಖಂಡ ಮೆಹಮೂದ್ ಹುಸೇನ್ ಬಲ್ಲೆ ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಕೊಪ್ಪಳದಲ್ಲಿ ಮಂಗಳವಾರ ಹುಟ್ಟುಹಬ್ಬ ಆಚರಿಕೊಂಡ ಹುಸೇನ್ ಅವರು ಸ್ನೇಹಿತರ ಜೊತೆಗೂಡಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಖುಷಿಪಟ್ಟ ವಿಡಿಯೋವನ್ನು ತಮ್ಮ ಫೇಸ್‍ಬುಕ್ ಖಾತೆಯಿಂದಲೇ ಪೋಸ್ಟ್ ಮಾಡಿದ್ದಾರೆ.
ರಾಜಕೀಯಕ್ಕೆ ಸೇರುವ ಮೊದಲು ಹುಸೇನ್ ರೌಡಿ ಶೀಟರ್ ಸಹ ಆಗಿದ್ದರು. ಈಗ ರೌಡಿಸಂ ಬಿಟ್ಟು ರಾಜಕೀಯಕ್ಕೆ ಸೇರಿ ಒಂದು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಆದರೆ ತಮ್ಮ ಸ್ಥಾನದ ಬೆಲೆ ಮರೆತು ವಿಕೃತವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರೋದಕ್ಕೆ ಸಾರ್ವಜನಿಕರು ಟೀಕೆ ವ್ಯಕ್ತಪಡಿಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸುವುದು ತಪ್ಪು. ಅದರಲ್ಲೂ ತಲ್ವಾರ್‌ನಿಂದ ಕೇಕ್ ಕಟ್ ಮಾಡ್ತಿರೋದನ್ನು ಫೇಸ್‍ಬುಕ್ ನಲ್ಲಿ ಹಾಕಿಕೊಂಡು ರೌಡಿ ಚಟುವಟಿಕೆಗೆ ಪ್ರೇರೇಪಿಸುತ್ತಿದ್ದಾರೆ ಎಂಬ ಆರೋಪ ಅವರ ವಿರುದ್ಧ ಕೇಳಿಬರುತ್ತಿದೆ.
ಈ ಹಿಂದೆ ಕೂಡ ಹಲವು ಮಂದಿ ಹೀಗೆ ತಲ್ವಾರ್‌ನಿಂದ ಕೇಕ್ ಕತ್ತರಿಸಿ ವಿಕೃತವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಹೀಗೆ ಮಾಡುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ರೌಡಿ ಚಟುವಟಿಕೆಗಳನ್ನು ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಗಳ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv