Connect with us

Bengaluru City

ಎಚ್‍ಡಿಕೆಗೆ ಕೈಯಾರೆ ಅಡುಗೆ ಮಾಡಿ ಬಡಿಸಿದ ಕಿಚ್ಚ ಸುದೀಪ್

Published

on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಭಾನುವಾರ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಗೆ ಭೇಟಿ ನೀಡಿದ್ದಾರೆ.

ಮಧ್ಯಾಹ್ನ 2 ಗಂಟೆಗಳ ಕಾಲ ಊಟ ಮಾಡುತ್ತಾ ಇಬ್ಬರು ಆತ್ಮೀಯವಾಗಿ ಮಾತುಕತೆ ನಡೆಸಿದರು. ಸ್ವತಃ ಕಿಚ್ಚ ಸುದೀಪ್ ಅವರೇ ಅಡುಗೆ ಮಾಡಿ ಕುಮಾರಸ್ವಾಮಿ ಅವರಿಗೆ ಉಣಬಡಿಸಿದ್ದು ವಿಶೇಷವಾಗಿತ್ತು.

ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಶನಿವಾರ ಶುಭ ಕೋರಿದ್ದ ಕಿಚ್ಚ, ತಮ್ಮ ಮನೆಗೆ ಬನ್ನಿ ಎಂದು ಕರೆದಿದ್ದರು. ಕಿಚ್ಚನ ಕರೆಗೆ ಓಗೊಟ್ಟು ಕುಮಾರಸ್ವಾಮಿ ಅವರು ಇಂದು ಸುದೀಪ್ ಅವರ ಮನೆಗೆ ಭೇಟಿ ನೀಡಿದರು.

ಕುಮಾರಸ್ವಾಮಿ ಅವರನ್ನು ಬಹಳ ಸಂತಸದಿಂದ ಬರಮಾಡಿಕೊಂಡ ಕಿಚ್ಚ, ತನ್ನ ಕೈಯಾರೆ ಅಡುಗೆ ಮಾಡಿ ಕುಮಾರಸ್ವಾಮಿ ಅವರಿಗೆ ಬಡಿಸಿದರು. ಇಬ್ಬರೂ ಜೊತೆಗೂಡಿ 2 ಗಂಟೆಗಳ ಕಾಲ ಬಹಳ ಆತ್ಮೀಯತೆಯಿಂದ ಮಾತುಕತೆ ನಡೆಸಿದರು.  ಇದನ್ನೂ ಓದಿ: ಸಿಎಂರನ್ನು ದಿಢೀರ್ ಭೇಟಿ ಮಾಡಿದ ಕಿಚ್ಚ ಸುದೀಪ್