ಹಾಸನ: ಜೆಡಿಎಸ್ ಮುಖಂಡ ಪ್ರಶಾಂತ್ ಹತ್ಯೆಯ ಬಳಿಕ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಭದ್ರತೆಗಾಗಿ ನಗರದಲ್ಲಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
Advertisement
ಪ್ರಸ್ತುತ ಪ್ರಶಾಂತ್ ಮೃತದೇಹ ಹಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿದೆ. ಈ ಹಿನ್ನೆಲೆ ಆಸ್ಪತ್ರೆ ಮತ್ತು ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಆಸ್ಪತ್ರೆ ಬಳಿ ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗುವುದು.
Advertisement
Advertisement
ಸೂಕ್ತ ಬಂದೋಬಸ್ತ್‌ಗೆ ಹೊರ ಜಿಲ್ಲೆಯಿಂದಲೂ ಪೊಲೀಸರು ಆಗಮಿಸಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜನೆ ಮಾಡಲಾಗಿದೆ. ಈಗಾಗಲೇ ಆರೋಪಿಗಳಿಗಾಗಿ ಚುರುಕಿನಿಂದ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ
Advertisement
ಪ್ರಶಾಂತ್ ಅವರು ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿಯಾಗಿದ್ದರು. ಈ ಹಿನ್ನೆಲೆ ಪ್ರಶಾಂತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಹಾಸನ ಕಟ್ಟಿನಕೆರೆ ಮಾರುಕಟ್ಟೆ ಬಂದ್ ಮಾಡಲಾಗಿದೆ.