ಬೆಂಗಳೂರು: ರಾಜ್ಯಸಭೆ ಚುನಾವಣೆ ಕಣ ರಂಗೇರುತ್ತಿದ್ದು, ಕಾಂಗ್ರೆಸ್ ನಾಯಕರನ್ನ ಮನವೊಲಿಸುವ ಕೆಲಸಕ್ಕೆ ಜೆಡಿಎಸ್ ಮುಂದಾಗಿದೆ. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಜೆಡಿಎಸ್ ನಾಯಕರಿಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
Advertisement
ಸಿದ್ದರಾಮಯ್ಯರ ಸರ್ಕಾರಿ ನಿವಾಸದಲ್ಲಿ ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯರಾದ ಫಾರೂಕ್ ಮತ್ತು ಶರವಣ ಅವರ ನಿಯೋಗ ಸಿದ್ದರಾಮಯ್ಯರೊಂದಿಗೆ ಚರ್ಚೆ ನಡೆಸಿತು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಜೆಡಿಎಸ್ ನಿಯೋಗ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿ, ಬೆಂಬಲ ಕೇಳಿದೆ. ಇದನ್ನೂ ಓದಿ: ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಬೇಸತ್ತಿದ್ದಾರೆ – ಎಚ್ಚರ ಡಿಕೆಶಿ ಎಚ್ಚರ: ಬಿಜೆಪಿ
Advertisement
Advertisement
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಶರವಣ, ಬಿಜೆಪಿ ಗೆಲ್ಲಬಾರದೆಂಬುದು ಎರಡೂ ಪಕ್ಷಗಳ ಆಶಯ. ಬಿಜೆಪಿ ವಿರುದ್ಧ ಜಾತ್ಯಾತೀತ ಪಕ್ಷಗಳು ಒಂದಾಗಬೇಕು. ಹೀಗಾಗಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಕೊಡಿ ಅಂತ ಮನವಿ ಮಾಡಿದ್ದೇವೆ. ಕಾಂಗ್ರೆಸ್‌ಗಿಂತ ಜೆಡಿಎಸ್ ಬಳಿ ಹೆಚ್ಚು ಸ್ಥಾನಗಳಿವೆ. ಹಾಗಾಗಿ ನಮಗೆ ಬೆಂಬಲ ಕೊಡುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಸವಣ್ಣನ ಪಠ್ಯವನ್ನೇ ತಿರುಚಲಾಗಿದೆ: ಲಿಂಗಾಯತ ಸ್ವಾಮೀಜಿಗಳು ಅಸಮಾಧಾನ
Advertisement
ಸಿದ್ದರಾಮಯ್ಯ ಕೂಡಾ ಈ ಬಗ್ಗೆ ಪಕ್ಷದ ಶಾಸಕರು, ಹೈಕಮಾಂಡ್ ಜೊತೆ ಚರ್ಚೆ ಮಾಡುತ್ತೇನೆ ಅಂತ ತಿಳಿಸಿದ್ದಾರೆ. ಕಾಂಗ್ರೆಸ್ ಜೆಡಿಎಸ್‌ಗೆ ಬೆಂಬಲ ನೀಡುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಆಕ್ಸ್ ಫರ್ಡ್ ಯೂನಿವರ್ಸಿಟಿಯಲ್ಲಿ ಅವಮಾನ
ಇತ್ತ ಜೆಡಿಎಸ್ ನಿಯೋಗಕ್ಕೂ ಸಿದ್ದರಾಮಯ್ಯ ಸ್ಪಷ್ಟ ಭರವಸೆ ನೀಡಿಲ್ಲ ಅಂತ ಮೂಲಗಳು ಹೇಳ್ತಿವೆ. ಬೆಂಬಲ ನೀಡುವ ಬಗ್ಗೆ ಬಗ್ಗೆ ಸಿದ್ದರಾಮಯ್ಯ ಯಾವುದೇ ಭರವಸೆಯನ್ನೂ ನೀಡಿಲ್ಲ. ಶಾಸಕರ ಜೊತೆ ಚರ್ಚೆ ಮಾಡುತ್ತೇನೆ ಅಂತ ಹೇಳಿ ಕಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.