ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಇಂದು ಸಂಜೆ ಬೆಂಗಳೂರು ಹೊರವಲಯದ ರೆಸಾರ್ಟ್ವೊಂದರಲ್ಲಿ ನಡೆಯಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಜನ್ಮದಿನದ ಪ್ರಯುಕ್ತ ಶಾಸಕರಿಗೆ ಔತಣ ಕೂಟದ ಜೊತೆಗೆ ಈ ಸಭೆ ಆಯೋಜಿಸಲಾಗಿದೆ.
Advertisement
ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಕುರಿತಂತೆ ಚರ್ಚೆ ನಡೆಯಲಿದೆ. ವಿಧಾನಸಭೆಯಲ್ಲಿ ಜೆಡಿಎಸ್ ಇರುವ ಸದಸ್ಯರ ಬಲದಲ್ಲಿ ಪರಿಷತ್ಗೆ ಒಬ್ಬರು ಅಭ್ಯರ್ಥಿ ಸುಲಭವಾಗಿ ಆಯ್ಕೆ ಆಗಬಹುದು. ಹೀಗಾಗಿ ಆ ಒಂದು ಸ್ಥಾನಕ್ಕಾಗಿ ತೀವ್ರ ಪೈಪೋಟಿ ಇದ್ದು, ವರಿಷ್ಠರ ಸಮ್ಮುಖದಲ್ಲಿ ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದೇ ವೇಳೆ ರಾಜ್ಯಸಭೆಗೆ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತಂತೆಯೂ ಸಮಾಲೋಚನೆ ನಡೆಯಲಿದೆ. ಇದನ್ನೂ ಓದಿ: ದೇವೇಗೌಡರ ಜನ್ಮದಿನಕ್ಕೆ ಶುಭಕೋರಿದ ಮೋದಿ
Advertisement
ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮೊದಲಾದವರು ಭಾಗವಹಿಸಲಿದ್ದಾರೆ.