ಮೈಸೂರು: ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಪಕ್ಷದ ವಿರುದ್ಧವೇ ಹೇಳಿಕೆ ನೀಡಿದ್ದಾರೆ. ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಜೆಡಿಎಸ್‌ಗೆ ಸೋಲಾಗಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.
ಚುನಾವಣೆ ಫಲಿತಾಂಶ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿದ್ದಕ್ಕೆ ಮತದಾರರಿಗೆ ಧನ್ಯವಾದ ಹೇಳುತ್ತೇನೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ದಾಖಲೆಯ ಗೆಲುವು
ಮತದಾರರು ಪ್ರಬುದ್ಧತೆ ಪ್ರದರ್ಶಿಸಿದ್ದಾರೆ. ರಾಜ್ಯ ಸರ್ಕಾರದ ಆಡಳಿತ ವೈಫಲ್ಯದಿಂದ ಬಿಜೆಪಿಗೆ ಸೋಲಾಗಿದೆ. ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಮಹಾತ್ಮರ ಪಠ್ಯ ಕೈ ಬಿಟ್ಟಿದ್ದಕ್ಕೆ ಮತದಾರರು ಆಕ್ರೋಶಗೊಂಡು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಕ್ಷೇತ್ರಕ್ಕೆ ಸಂಬಂಧವೇ ಇರದ ವ್ಯಕ್ತಿಯನ್ನು ಜೆಡಿಎಸ್ ಅಭ್ಯರ್ಥಿ ಮಾಡಿದ್ದಕ್ಕೆ ಜೆಡಿಎಸ್‌ಗೆ ಸೋಲಾಗಿದೆ. ಜೆಡಿಎಸ್ ಸೋಲು ನನಗೆ ಅತೀವ ಸಂತಸ ತಂದಿದೆ ಎಂದು ಮರಿತಿಬ್ಬೇಗೌಡ ತಮ್ಮ ಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ರಾಜಕೀಯ ಕಂಡು ಹೊಟ್ಟೆ ಉರಿ ಪಡ್ತಿದ್ದಾರೆ: ಸಿದ್ದರಾಮಯ್ಯ