ತುಮಕೂರು: ಬಜೆಟ್‍ನಲ್ಲಿ ಗುಬ್ಬಿ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಘೋಷಣೆ ಆಗದಿದ್ದುದರಿಂದ ಸಣ್ಣಕೈಗಾರಿಕಾ ಸಚಿವ ಎಸ್.ಆರ್ ಶ್ರೀನಿವಾಸ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮುನಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ವಿವಿಧ ಯೋಜನೆಗಳಿಗೆ ಸುಮಾರು 400 ಕೋಟಿ ರೂ ಬೇಡಿಕೆ ಇಟ್ಟಿದ್ದೆ. ಆದ್ರೆ ಬಸವಬೃಂಗ ಮಠಕ್ಕೆ 1 ಕೋಟಿ ಅನುದಾನ ಘೋಷಣೆ ಮಾಡಿರುವುದು ಬಿಟ್ಟರೆ ಇನ್ನು ಯಾವುದೇ ಘೋಷಣೆ ಆಗಿಲ್ಲ. ಇದರಿಂದ ನನಗೆ ನೋವಾಗಿದೆ. ಮನಸ್ಸಿನ ಒಳಗಡೆ ತುಂಬಾ ನೋವಿದೆ ಎಂದು ಹೇಳಿದ್ದಾರೆ.
ಹೇಮಾವತಿಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಬೇಡಿಕೆ ಇಟ್ಟಿದ್ದೆ. ಅದೂ ಕೈಗೂಡಲಿಲ್ಲ. ಇದರ ಪರಿಣಾಮ ನಾನು ಅನುಭಿಸಬೇಕಾಗುತ್ತದೆ. ಮುಂದಿನ ದಿನದಲ್ಲಿ ಅದರ ಪರಿಣಾಮ ಜನ ನನಗೆ ಕಲಿಸ್ತಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಕರೆ ಸ್ವೀಕರಿಸಿಲ್ಲ ಅನ್ನೋದು ಸುಳ್ಳು. ನಿನ್ನೆ ಸಿಎಂ ಕರೆದ ಮೀಟಿಂಗ್‍ಗೆ ಹೋಗಲು ಸಾಧ್ಯವಾಗಲಿಲ್ಲ. ಮುಂದಿನ ದಿನದಲ್ಲಿ ಸಿಎಂ ನನ್ನ ಎಲ್ಲಾ ಬೇಡಿಕೆ ಈಡೇರಿಸ್ತಾರೆ ಅನ್ನೊ ಭರವಸೆ ಇದೆ. ಕ್ಷೇತ್ರದಲ್ಲಿ ಕೆಲಸ ಇತ್ತು ಹಾಗಾಗಿ ಹೋಗಲು ಸಾಧ್ಯವಾಗಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv