ಮಂಡ್ಯ: ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಸಿದ್ದರಾಮಯ್ಯನವರ ಮನೆಗೆ ಹೋಗಿದ್ದೆ ಎಂದು ಮೇಲುಕೋಟೆಯ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಚರ್ಚೆ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಡಿಂಕಾ ಮಲ್ಲಿಗೆರೆ ಗ್ರಾಮದಲ್ಲಿ ಸಿದ್ದರಾಮೇಶ್ವರ ದೇವಾಲಯ ನಿರ್ಮಾಣ ಮಾಡಿದ್ದಾರೆ. ದೇವಾಲಯ ಸಮಿತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡುವಂತೆ ಒತ್ತಾಯಿಸಿದ್ದರು ಎಂದರು. ಇದನ್ನೂ ಓದಿ: ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿದ್ದೇನೆ: ಬೊಮ್ಮಾಯಿ
ಹೀಗಾಗಿ ಸಿದ್ದರಾಮಯ್ಯನವರ ಭೇಟಿಗೆ ಸಮಯ ಕೇಳಿದ್ದು, ಅವರು ನಿನ್ನೆ ಬೆಳಿಗ್ಗೆ 7 ಗಂಟೆಗೆ ಸಮಯ ನೀಡಿದ್ದರು. ಆದರೆ ಸಿದ್ದರಾಮಯ್ಯನವರನ್ನು ಸಂಜೆ 6:30ಕ್ಕೆ ಭೇಟಿಯಾಗಲು ಹೋಗಿದ್ದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕೇರಳದ ಬಾಲಿಕಾ ಗೃಹದಿಂದ 6 ಹುಡುಗಿಯರು ನಾಪತ್ತೆ – ಒಬ್ಬಳು ಬೆಂಗ್ಳೂರಿನಲ್ಲಿ ಪತ್ತೆ
ಅದೇ ವೇಳೆಗೆ ಎಂ.ಬಿ.ಪಾಟೀಲ್, ಜಮೀರ್ ಅಹಮದ್ ಸಿದ್ದರಾಮಯ್ಯ ಅವರ ಮನೆಗೆ ಬಂದರು. ಇದನ್ನೂ ಗಮನಿಸಿದ ಯಾರೋ ಫೋಟೋ ತೆಗೆದು ವೈರಲ್ ಮಾಡಿದ್ದಾರೆ. ರಾಜಕೀಯದ ಬಗ್ಗೆ ಮಾತನಾಡೋದಕ್ಕೆ ಏನಿದೆ? ನಾನು ಜೆಡಿಎಸ್, ಅವರು ಕಾಂಗ್ರೆಸ್, ಹಾಗಾಗಿ ರಾಜಕೀಯ ಚರ್ಚೆ ಏನೂ ಇಲ್ಲ ಎಂದು ನುಡಿದರು.